ಅಭಿವೃದ್ದಿ ಕಾರ್ಯಗಳಿಗೆ ಆದ್ಯತೆ

ಸರಗೂರು ತಾಲೂಕಿನ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಗುತನಮೂಳೆ ಗ್ರಾಮದಲ್ಲಿ ಹುಣಸೂರು ಸರ್ಕಲ್, ಮುತ್ತಿಗೆಹುಂಡಿ, ಚನ್ನಗುಂಡಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ ನೀಡಿದರು. ತಹಸೀಲ್ದಾರ್ ಮೋಹನಕುಮಾರಿ, ತಾಪಂ ಇಒ ಪ್ರೇಮ್‌ಕುಮಾರ್, ಸಿಪಿಐ ಪ್ರಸನ್ನಕುಮಾರ್, ತಾಲೂಕು ಆರೋಗ್ಯಾಧಿಕಾರಿ ಟಿ.ರವಿಕುಮಾರ್, ಅರಣ್ಯಾಧಿಕಾರಿ ಡಿ ಪರಮೇಶ್,ಲ್ಯಾಂಡ್ ಆರ್ಮಿ ಇಂಜಿನಿಯರ್ ಕೀರ್ತಿಪ್ರಭು ಇದ್ದರು.

Published on
ಸರಗೂರು : ಬಹಳಷ್ಟು ವರ್ಷಗಳಿಂದ ತಾಲೂಕಿನಲ್ಲಿ ನನೆಗುದಿಗೆ ಬಿದ್ದಿದ್ದ ಕಾಮಗಾರಿಗಳಿಗೆ ಸರ್ಕಾರದಿಂದ ವಿಶೇಷ ಅನುದಾನ ತಂದು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಗುತನಮೂಳೆ ಗ್ರಾಮದಲ್ಲಿ ಮಸೀದಿ ಕಟ್ಟಡ, ಹುಣಸೂರು ಸರ್ಕಲ್, ಮುತ್ತಿಗೆಹುಂಡಿ, ಚನ್ನಗುಂಡಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮೂಲಸೌಕರ್ಯದಿಂದ ವಂಚಿತವಾಗಿರುವ ಗ್ರಾಮಗಳನ್ನು ಹಂತ-ಹಂತವಾಗಿ ಅಭಿವೃದ್ಧಿಗೊಳಿಸಲು ಕ್ರಮವಹಿಸಲಾಗುವುದು ಎಂದರು. ರಾಜ್ಯ ಸರ್ಕಾರದ ಹಲವು ಗ್ಯಾರಂಟಿ ಯೋಜನೆಗಳ ನಡುವೆಯೂ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುವಂತೆ ಪ್ರತಿದಿನ ವಿವಿಧ ಇಲಾಖೆಗಳ ಸಚಿವರನ್ನು ಭೇಟಿ ಮಾಡಿ ಅನುದಾನ ತರುತ್ತಿದ್ದೇನೆ. ಜನರ ಒಳಿತಿಗಾಗಿ ಅವಿರತ ಶ್ರಮಿಸುವೆ ಎಂದರು.
ಮುಗುತನಮೂಳೆ ಗ್ರಾಮವು ಮುಖ್ಯ ರಸ್ತೆಯಿಂದ 4 ಕಿ.ಮೀ.ದೂರವಿದೆ. ಸಂಪರ್ಕ ರಸ್ತೆ ತುಂಬಾ ಹದಗೆಟ್ಟಿದೆ. ಇದನ್ನು ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಮಾಡಲಾಗುವುದು. ಗ್ರಾಮದಲ್ಲಿ ಹಲವು
ಸಮುದಾಯಗಳಿವೆ. ಕುಡಿಯುವ ನೀರಿನ ಸಮಸ್ಯೆ ಇದೆ. ದೇವಸ್ಥಾನ ಮತ್ತು ಸಮುದಾಯ ಭವನ ನಿರ್ಮಾಣ, ರಸ್ತೆ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಸೂಕ್ತ ಚರಂಡಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು. ಮುಗುತನಮೂಳೆ ಕಾಡಂಚಿನ ಗ್ರಾಮವಾಗಿದೆ. ಕಾಡುಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯಾಧಿಕಾರಿಗಳು ಕ್ರಮವಹಿಸಬೇಕು ಎಂದರು.
ಸ್ಥಳೀಯ ಮುಖಂಡರು ಗ್ರಾಮದ ಸಮಸ್ಯೆಗಳನ್ನು ಕುರಿತು ಶಾಸಕರಿಗೆ ಮನವಿ ಮಾಡಿದರು.
ತಹಸೀಲ್ದಾರ್ ಮೋಹನಕುಮಾರಿ, ತಾಪಂ ಇಒ ಪ್ರೇಮ್‌ಕುಮಾರ್, ಸಿಪಿಐ ಪ್ರಸನ್ನಕುಮಾರ್, ತಾಲೂಕು ಆರೋಗ್ಯಾಧಿಕಾರಿ ಟಿ.ರವಿಕುಮಾರ್, ಅರಣ್ಯಾಧಿಕಾರಿ ಡಿ ಪರಮೇಶ್,ಲ್ಯಾಂಡ್ ಆರ್ಮಿ ಇಂಜಿನಿಯರ್ ಕೀರ್ತಿಪ್ರಭು, ಅಭಿ, ಪಿಡಿಒ ರೇಣುಕಪ್ಪ,ಗಜೇಂದ್ರ, ಜಿಪಂ ಸದಸ್ಯೆ ಭಾಗ್ಯಲಕ್ಷ್ಮೀ, ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವರಾಜು ಮತ್ತು ಗ್ರಾಮಸ್ಥರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net