ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ ಶಾಲಿನಿ ಆಯ್ಕೆ

 ಶಾಲಿನಿ
ಶಾಲಿನಿ
Published on
ನಂಜನಗೂಡು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಧಾರವಾಡದ ಬಾಲ ವಿಕಾಸ ಅಕಾಡೆಮಿಯಿಂದ ಆಯೋಜಿಸಿರುವ ರಾಜ್ಯ ಮಟ್ಟದ ‘ಜವಹಾರ್ ಲಾಲ್ ನೆಹರು ಚಿಂತನೆಗಳು’ ಎಂಬ ವಿಷಯವಾಗಿ ಭಾಷಣ ಸ್ಪರ್ಧೆಗೆ ನಂಜನಗೂಡಿನ ಜೆಸ್‌ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಶಾಲಿನಿ ಆಯ್ಕೆಯಾಗಿದ್ದಾರೆ.
ಕಾಲೇಜಿನ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲಿನಿ ತಾಲೂಕು ಮಟ್ಟದ ಭಾಷಣಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರು, ಮೈಸೂರಿನ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಬಾಲಕಿಯರ ಸರ್ಕಾರಿ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಈಗ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರನ್ನು ಜೆಎಸ್‌ಎಸ್‌ಸ್ ಮಹಾವಿದ್ಯಾಪೀಠ, ಮೈಸೂರಿನ ಶಾಲಾ ಶಿಕ್ಷಣ ಇಲಾಖೆ(ಪಿಯು), ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net