ಶಿವಕುಮಾರ ಸ್ವಾಮೀಜಿ ಬದುಕು ಸಮಾಜಕ್ಕೆ ದಾರಿದೀಪ : ಶಾಸಕ ಜಿ.ಟಿ. ದೇವೇಗೌಡ ಅಭಿಪ್ರಾಯ

 ರಾಮಕೃಷ್ಣ ಸಾಂಸ್ಕೃತಿಕ ಮತ್ತು ಕ್ರೀಡಾ ಸಮಿತಿ ವತಿಯಿಂದ ಬುಧವಾರ ರಾಮಕೃಷ್ಣನಗರದಲ್ಲಿ ಆಯೋಜಿಸಿದ್ದ ಡಾ. ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಶಿವಕುಮಾರ ಸ್ವಾಮೀಜಿ ಕುರಿತ ಕೃತಿಯನ್ನು ಶಾಸಕ ಜಿ.ಟಿ.ದೇವೇಗೌಡ ಬಿಡುಗಡೆ ಮಾಡಿದರು. ನಗರಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್, ಬಿಜೆಪಿ ಮುಖಂಡ ಕವೀಶ್ ಗೌಡ ಇದ್ದರು.
ರಾಮಕೃಷ್ಣ ಸಾಂಸ್ಕೃತಿಕ ಮತ್ತು ಕ್ರೀಡಾ ಸಮಿತಿ ವತಿಯಿಂದ ಬುಧವಾರ ರಾಮಕೃಷ್ಣನಗರದಲ್ಲಿ ಆಯೋಜಿಸಿದ್ದ ಡಾ. ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಶಿವಕುಮಾರ ಸ್ವಾಮೀಜಿ ಕುರಿತ ಕೃತಿಯನ್ನು ಶಾಸಕ ಜಿ.ಟಿ.ದೇವೇಗೌಡ ಬಿಡುಗಡೆ ಮಾಡಿದರು. ನಗರಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್, ಬಿಜೆಪಿ ಮುಖಂಡ ಕವೀಶ್ ಗೌಡ ಇದ್ದರು.
Published on
ಮೈಸೂರು: ನಡೆದಾಡುವ ದೇವರು ಎಂದೇ ಜನಮಾನಸದಲ್ಲಿ ಅಚ್ಚ ಅಳಿಯದಂತೆ ಉಳಿದಿದುರವ ಸಿದ್ಧಗಂಗಾಂಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಬದುಕು, ನಡೆದುಬಂದ ದಾರಿಯು ಇಂದಿನ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
ರಾಮಕೃಷ್ಣ ಸಾಂಸ್ಕೃತಿಕ ಮತ್ತು ಕ್ರೀಡಾ ಸಮಿತಿ ವತಿಯಿಂದ ಬುಧವಾರ ರಾಮಕೃಷ್ಣನಗರದಲ್ಲಿ ಆಯೋಜಿಸಿದ್ದ ಚಿಂತನ-ಮಂಥನ ಕಾರ್ಯಕ್ರಮ ಮತ್ತು ಡಾ. ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾಮೀಜಿ ಜಯಂತಿ ಪ್ರಯುಕ್ತ ನಗರವನ್ನು ಸ್ವಚ್ಛವಾಗಿಡುವ ಪೌರಕಾರ್ಮಿಕರಿಗೆ ಕ್ಯಾಪ್, ಗಿಡಗಳು ಹಾಗೂ ಮೆಡಿಕಲ್ ಕಿಟ್ ವಿತರಣೆ ಮತ್ತು ಯುವ ಸಮಾಜ ಸೇವಕರಿಗೆ ಸನ್ಮಾನ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದರು.
ನಾಡಿಗೆ ಬೆಳಕಾದ ಶಿವಕುಮಾರಸ್ವಾಮೀಜಿ ತಮ್ಮ ಜೀವನವನ್ನು ಸಮಾಜಸೇವೆಗೆ ಅರ್ಪಿಸಿ ಜ್ಞಾನ, ಅನ್ನ ಮತ್ತು ವಿದ್ಯೆುಯನ್ನು ಹಂಚಿದ ತ್ರಿವಿಧ ದಾಸೋಹಿ ಆಗಿದ್ದರು. ಜ್ಞಾನ ಮತ್ತು ದಾಸೋಹದಿಂದಲೇ ಶ್ರೀಗಳು ದೇಶದಲ್ಲಿ ಗಮನ ಸೆಳೆದಿದ್ದರು. ಬಸವಣ್ಣ ಅವರ ಆಶಯ ಹಾಗೂ ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕಾಯಕ ಮತ್ತು ಆತ್ಮವಿಶ್ವಾಸದ ಮೂಲಕ ಸಮಾಜಕ್ಕೆ ಮಾರ್ಗದರ್ಶನ ಮಾಡಿದ ಮಹಾನ್ ವ್ಯಕ್ತಿತ್ವ ಅವರದ್ದು ಎಂದು ಬಣ್ಣಿಸಿದರು.
ಸ್ವಾತಂತ್ರೃ ಪೂರ್ವದಲ್ಲೇ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸಿದ ಶಿವಕುಮಾರ ಸ್ವಾಮೀಜಿ ಅವರು ಸಿದ್ಧಗಂಗಾ ಕ್ಷೇತ್ರದಲ್ಲಿ ಯಾವುದೇ ಮಗು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಅನ್ನ ಮತ್ತು ಶಿಕ್ಷಣವನ್ನು ಉಚಿತವಾಗಿ ನೀಡಿದರು. 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪರಾದರು. ಸಿದ್ಧಗಂಗಾಮಠದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ಉತ್ತಮ ಸ್ಥಾನಕ್ಕೆ ಏರಿದ್ದಾರೆ ಎಂದರು.
ಈ ಸಂದರ್ಭ ನಗರಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್, ಬಿಜೆಪಿ ಮುಖಂಡ ಕವೀಶ್ ಗೌಡ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net