ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ ಒಂದಾದ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಫೆ.15ರಂದು ನಡೆಯುವ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮೂಲ ದೇವರಿಗೆ ಚಿನ್ನದ ಕೊಳಗ ಮುಖವಾಡ ಧರಿಸಲಾಗುವುದು, ಭಕ್ತಾಧಿಗಳ ಅನಕೂಲಕ್ಕಾಗಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಪ್ರಸಾದ ವಿತರಣೆಗೆ ಏರ್ಪಾಡು ಮಾಡಲಾಗಿದ್ದು, ಬೆಳಗ್ಗೆ 6.30 ಗಂಟೆಯಿಂದ ಸಂಜೆ 4.30 ರವರೆಗೆ ಸಾರ್ವಜನಿಕರಿಗೆ ಸಾಮಾನ್ಯ ದರ್ಶನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ರಾತ್ರಿ 10 ಗಂಟೆಗೆ ಸರ್ಕಾರಿ ಸೇವೆಯ ಮೂಲಕ ಏಕಾದಶಿ ರುದ್ರಾಭಿಷೇಕ ಇರುವುದರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿರಂತರ ದರ್ಶನದ ವ್ಯವಸ್ಥೆಯ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.