ನೀಟ್ ಅಕ್ರಮ ಕೇಂದ್ರದಿಂದ ಉದ್ಧಟತನ ಪ್ರದರ್ಶನ: ಆರೋಪ

ಸೋನಂ ವಾಂಗ್ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದನ್ನು ಖಂಡಿಸಿ ರಾಮಸ್ವಾಮಿ ವೃತ್ತದಲ್ಲಿ ಎಐಡಿಎಸ್‌ಒ ನಿಂದ ಪ್ರತಿಭಟನೆ ನಡೆಯಿತು. ಸಂತೋಷ ಕೌಲಗಿ, ರತಿರಾವ್, ಜಿ.ಪಿ.ಬಸವರಾಜು, ಉಗ್ರನರಸಿಂಹೇಗೌಡ, ನಿತಿನ್, ಚಂದ್ರಕಲಾ, ಸ್ವಾತಿ ಇತರರು ಇದ್ದರು.
ಸೋನಂ ವಾಂಗ್ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದನ್ನು ಖಂಡಿಸಿ ರಾಮಸ್ವಾಮಿ ವೃತ್ತದಲ್ಲಿ ಎಐಡಿಎಸ್‌ಒ ನಿಂದ ಪ್ರತಿಭಟನೆ ನಡೆಯಿತು. ಸಂತೋಷ ಕೌಲಗಿ, ರತಿರಾವ್, ಜಿ.ಪಿ.ಬಸವರಾಜು, ಉಗ್ರನರಸಿಂಹೇಗೌಡ, ನಿತಿನ್, ಚಂದ್ರಕಲಾ, ಸ್ವಾತಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಮುಖ ಪರೀಕ್ಷೆಗಳಲ್ಲಿ ನಡೆದಿರುವ ಸರಣಿ ಅಕ್ರಮಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿವೆ
  • ಪರೀಕ್ಷೆ ರದ್ದಾದ ಕೇವಲ ಒಂದೇ ತಿಂಗಳ ಅವಧಿಯಲ್ಲಿ ದೇಶಾದ್ಯಂತ 23 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಮೈಸೂರು:ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ಶಾಂತಿಯುತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದನ್ನು ಖಂಡಿಸಿ ರಾಮಸ್ವಾಮಿ ವೃತ್ತದಲ್ಲಿ ಎಐಡಿಎಸ್‌ಒ ನಿಂದ ಪ್ರತಿಭಟನೆ ನಡೆಯಿತು.
ಸಂಘಟನೆ ರಾಜ್ಯ ಉಪಾಧ್ಯಕ್ಷ ಅಭಯ ದಿವಾಕರ್ ಮಾತನಾಡಿ, ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ಪ್ರಮುಖ ಪರೀಕ್ಷೆಗಳಲ್ಲಿ ನಡೆದಿರುವ ಸರಣಿ ಅಕ್ರಮಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿವೆ ಎಂದು ಟೀಕಿಸಿದರು.
ಪರೀಕ್ಷೆ ರದ್ದಾದ ಕೇವಲ ಒಂದೇ ತಿಂಗಳ ಅವಧಿಯಲ್ಲಿ ದೇಶಾದ್ಯಂತ 23 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟಾದರೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ವಹಿಸಿಕೊಳ್ಳದೇ ನುಣುಚಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಶ್ರಾಂತ ಕುಲಪತಿ ಪ್ರೊ.ಸಬಿಹ ಭೂಮಿಗೌಡ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇವಲ ವ್ಯವಸ್ಥೆಯ ವೈಲ್ಯವಲ್ಲ, ಶಿಕ್ಷಣ ಮಂತ್ರಿಗಳ ಬೇಜವಾಬ್ದಾರಿತನವಾಗಿದೆ. ಲಕ್ಷಾಂತರ ಜನರು ಬೀದಿಗಿಳಿದರೂ ಕಿವಿಕೊಡದ ಕೇಂದ್ರ ಸರ್ಕಾರ ಉದ್ಧಟತನ ಪ್ರದರ್ಶಿಸುತ್ತಿದೆ ಎಂದು ದೂರಿದರು.
ಸೋನಂ ವಾಂಗ್ಚುಕ್ ಮತ್ತು ಇತರ ಸತ್ಯಾಗ್ರಹಿಗಳೊಂದಿಗೆ ಕೇಂದ್ರ ಸರ್ಕಾರ ತಕ್ಷಣವೇ ಪ್ರಜಾಸತ್ತಾತ್ಮಕ ಚರ್ಚೆ ಆರಂಭಿಸಬೇಕು. ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಪರೀಕ್ಷೆಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿರುವ ಎನ್‌ಟಿಎ ಸಂಸ್ಥೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಜನಪದ ಸೇವಾ ಟ್ರಸ್ಟ್‌ನ ಸಂತೋಷ ಕೌಲಗಿ, ಮಹಿಳಾ ಹೋರಾಟಗಾರ್ತಿ ರತಿರಾವ್, ಸಾಮಾಜಿಕ ಹೋರಾಟಗಾರ ಜಿ.ಪಿ.ಬಸವರಾಜು, ಉಗ್ರನರಸಿಂಹೇಗೌಡ, ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ನಿತಿನ್, ಜಿಲ್ಲಾಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಹೇಮಾ, ಚಂದ್ರಿಕಾ, ಅಂಜಲಿ, ದಿಶಾ, ಅಭಿಷೇಕ್ ಸೇರಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net