ಮೈಸೂರಿನಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ನಾಟಿಕೋಳಿ ಬಿರಿಯಾನಿ ಹಂಚಿ ಸಂಭ್ರಮಾಚರಣೆ

ಸಿದ್ದರಾಮಯ್ಯ ಅಭಿಮಾನಿಗಳಿಂದ ಮೈಸೂರಿನಲ್ಲಿ ನಾಟಿಕೊಳಿ ಬಿರಿಯಾನಿ ನೀಡಲಾಯಿತು.
ಸಿದ್ದರಾಮಯ್ಯ ಅಭಿಮಾನಿಗಳಿಂದ ಮೈಸೂರಿನಲ್ಲಿ ನಾಟಿಕೊಳಿ ಬಿರಿಯಾನಿ ನೀಡಲಾಯಿತು.
Published on
ಮೈಸೂರು: ರಾಜ್ಯದ ಅತಿ ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಸಿದ್ದರಾಮಯ್ಯ ನಿರ್ಮಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾ ನಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಗರದಲ್ಲಿ ಸಂಭ್ರಮಾಚರಣೆ ನಡೆಯಿತು.
ಅಭಿಮಾನಿಗಳು ಜನರಿಗೆ ನಾಟಿ ಕೋಳಿ ಪಲಾವ್, ಸಿಹಿ ಹಂಚಿಕೆ ಮಾಡಿ ಸಿದ್ದರಾಮಯ್ಯ ಪರವಾಗಿ ಘೋಷಣೆಗಳನ್ನು ಕೂಗುವ ಮೂಲಕ ಸಂಭ್ರಮಾಚರಿಸಿದರು. ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಿದ್ದರಾಮಯ್ಯ ಅವರನ್ನು ಟಿಕೆ ಲೇಔಟ್‌ನಲ್ಲಿರುವ ಅವರ ನಿವಾಸದಲ್ಲಿ ಅಭಿಮಾನಿಗಳು ಭೇಟಿಯಾಗಿ ಶುಭಾಷಯಕೋರಿದರು.
ಗಣ್ಯರಿಂದ ಅಭಿನಂದನೆ: ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಕೆ.ಹರೀಶ್ ಗೌಡ, ಎ.ಆರ್.ಕೃಷ್ಣಮೂರ್ತಿ, ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಎಚ್.ಪಿ.ಮಂಜುನಾಥ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಮೈಲ್ಯಾಕ್ ಅಧ್ಯಕ್ಷ ಎಚ್.ಡಿ.ಗಣೇಶ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಮಾಜಿ ಮೇಯರ್‌ಗಳಾದ ಟಿ.ಬಿ.ಚಿಕ್ಕಣ್ಣ, ಅನಂತು, ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಹಾಗೂ ಇತರರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಗೂಡ್ಸ್ ಆಟೋದಲ್ಲಿ ನಾಟಿಕೋಳಿ ಪಲಾವ್ ತಂದು ನೂರಾರು ಜನರಿಗೆ ಹಂಚಲಾಯಿತು. ಸಿಎಂ ಅವರನ್ನು ಭೇಟಿಯಾಗಲು ಆಗಮಿಸಿದ್ದ ನೂರಾರು ಜನರು ಬೆಳ್ಳಂಬೆಳಗೆ ಬಿಸಿ ಬಿಸಿ ಪಲಾವ್ ತಿಂದರು. ನಗರಪಾಲಿಕೆ ಮಾಜಿ ಸದಸ್ಯ ಜೆ.ಗೋಪಿ ಸಿಹಿ ವಿತರಿಸಿದರು. ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು,ಮುಖಂಡರಾದ ಯೋಗೇಶ್ ಉಪ್ಪಾರ್, ಎಚ್.ಎಸ್. ಪ್ರಕಾಶ್, ಕೋಟೆಹುಂಡಿ ಸಿ.ಮಹದೇವು, ಹರೀಶ್ ಮೊಗಣ್ಣ ಹಾಗೂ ಇತರರು ಇದ್ದರು.
ಪೌರಕಾರ್ಮಿಕರಿಗೆ ಬಿರಿಯಾನಿ: ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬ್ರಿಗೇಡ್ ವತಿಯಿಂದ ಹೂಟಗಳ್ಳಿ ನಗರಸಭೆಯ ಪೌರಕಾರ್ಮಿಕರಿಗೆ ನಾಟಿಕೋಟಿ ಬಿರಿಯಾನಿ ಹಾಗೂ ಲಾಡು ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಸುದೀರ್ಘ ಕಾಲ ರಾಜ್ಯವನ್ನಾಳಿ ದಾಖಲೆ ನಿರ್ಮಾಣ ಮಾಡಿ ಜನರ ಮನಸ್ಸಿನಲ್ಲಿ ಉಳಿಯುವುದು ಅಷ್ಟು ಸುಲಭದ ಕೆಲಸವಲ್ಲ. ಆದರೆ, ಸಿದ್ದರಾಮಯ್ಯ ಎಲ್ಲರ ವಿಶ್ವಾಸ ಗಳಿಸುವ ಮೂಲಕ ಉತ್ತಮ ಆಡಳಿತ ನೀಡಿದ್ದಾರೆ ಎಂದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರಿಗೌಡ, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷ ಹಿನಕಲ್ ಉದಯ್, ಜಿ.ಪಂ. ಮಾಜಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣ, ನಗರಸಭೆ ಆಯುಕ್ತ ಚಂದ್ರಶೇಖರ್, ಪ್ರಮುಖರಾದ ಹಿನಕಲ್ ಉದಯ್, ಶ್ರೀನಿವಾಸ್, ಕೆ.ಜಿ. ನಾಗರಾಜ್, ಹಿನಕಲ್ ಪ್ರಕಾಶ್ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net