ನಾದಬ್ರಹ್ಮ ಸಂಗೀತ ಸಭಾದಲ್ಲಿ ಅಂದು ಸಂಜೆ 5 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಯೋಗನರಸಿಂಹ ದೇವಸ್ಥಾನ ಸಂಸ್ಥಾಪಕ ಡಾ.ಭಾಷ್ಯಂ ಸ್ವಾಮೀಜಿ ಉದ್ಘಾಟಿಸುವರು. ರಾಜ್ಯ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ನಾಗರಾಜ್ ಭೈರಿ, ನೆಹರು ಯುವ ಕೇಂದ್ರದ ನಿವೃತ್ತ ನಿರ್ದೇಶಕ ನಟರಾಜ್, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ವಕೀಲರಾದ ಎಚ್.ಹರೀಶ್ ಹೆಗ್ಡೆ, ಎಚ್.ಎನ್.ವೆಂಕಟೇಶ್, ಎಸ್.ಜೆ.ಮಧ್ವರಾಜ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ಭಾಗವಹಿಸುವರು. ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅಧ್ಯಕ್ಷತೆ ವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.