ಅಕ್ರಮಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ

ಪಿರಿಯಾಪಟ್ಟಣದ ದೇವರಾಜ ಅರಸು ಕಲಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಎಸ್.ಪಿ.ಮಲ್ಲಿಕಾರ್ಜುನ ಬಾಲದಂಡಿ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು. ಡಿವೈಎಸ್ಪಿ ರವಿಕುಮಾರ್, ಇನ್ಸ್ ಪೆಕ್ಟರ್ ಗಳಾದ ಗೋವಿಂದರಾಜು, ದೀಪಕ್ ಇತರರು ಇದ್ದರು.
ಪಿರಿಯಾಪಟ್ಟಣದ ದೇವರಾಜ ಅರಸು ಕಲಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಎಸ್.ಪಿ.ಮಲ್ಲಿಕಾರ್ಜುನ ಬಾಲದಂಡಿ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು. ಡಿವೈಎಸ್ಪಿ ರವಿಕುಮಾರ್, ಇನ್ಸ್ ಪೆಕ್ಟರ್ ಗಳಾದ ಗೋವಿಂದರಾಜು, ದೀಪಕ್ ಇತರರು ಇದ್ದರು.
Published on
ಪಿರಿಯಾಪಟ್ಟಣ : ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ, ಕಳ್ಳತನ ಮತ್ತು ಹೊರ ರಾಜ್ಯದ ಲಾಟರಿ ಮಾರಾಟ ದಂಧೆಗೆ ಕಡಿವಾಣ ಹಾಕಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.
ಪಟ್ಟಣದ ದೇವರಾಜ ಅರಸು ಕಲಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಮಾತನಾಡಿದರು. ಇಂದಿನ ಸಭೆಯಲ್ಲಿ ಸಾರ್ವಜನಿಕರು ಹಲವಾರು ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ವಿವಿಧ ಇಲಾಖೆ ಅಧಿಕಾರಿಗಳ ಸಹಕಾರದಿಂದ ಶಾಂತಿ, ಸುವ್ಯವಸ್ಥೆ ಪಾಲನೆಗೆ ಕ್ರಮ ವಹಿಸಲಾಗುವುದು ಎಂದರು. ಸಮಗ್ರ ಅಭಿವೃದ್ಧಿ ಎಂಬ ಹಣಕಾಸು ಸಂಸ್ಥೆ ಜನರಿಂದ ಪಿಗ್ಮಿಹಣ ಮಾಡಿಕೊಂಡಿದೆ. ಇದುವರೆಗೂ ಹಲವು ಗ್ರಾಹಕರಿಗೆ ಹಣ ಮರುಪಾವತಿ ಮಾಡಿಲ್ಲ. ಇದೇ ರೀತಿ ಕೆ. ಆರ್.ನಗರ, ಹುಣಸೂರು ತಾಲೂಕುಗಳಲ್ಲೂ ಮೋಸ ಮಾಡಲಾಗಿದೆ. ವಿವಿಧೆಡೆ ಎಫ್‌ಐಆರ್ ದಾಖಲಾಗಿದ್ದರೂ ಪಿರಿಯಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಸಾರ್ವಜನಿಕರೊಬ್ಬರು ದೂರಿದರು.
ಇದಕ್ಕೆ ಸ್ಪಂದಿಸಿದ ಎಸ್ಪಿ, ನಾಳೆಯೇ ಎಫ್‌ಐಆರ್ ದಾಖಲಿಸಿ ಎಂದು ಸ್ಥಳದಲ್ಲಿದ್ದ ಇನ್ಸ್‌ಪೆಕ್ಟರ್‌ಗೆ ಆದೇಶಿಸಿದರು. ಅಕ್ರಮ ಬಡ್ಡಿ ವ್ಯವಹಾರ, ಲೇವಾದೇವಿ ನಡೆಸುವವರು, ಇದಕ್ಕಾಗಿ ಜಮೀನು ದಾಖಲಾತಿ ಗಳನ್ನು ಇಟ್ಟುಕೊಂಡು ಶೋಷಣೆ ಮಾಡುವವರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಎಸ್ಪಿ ಸೂಚಿಸಿದರು.
ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿ ಮೂರು ಕಡೆ ಡಿವೈಡರ್‌ಗಳನ್ನು ಓಪನ್ ಮಾಡಿದ್ದರಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮದ್ಯ, ಗಾಂಜಾ ಹಾವಳಿ, ಅನೈತಿಕ ಚಟುವಟಿಕೆ, ಬೆಳಗಿನ ಸಮಯದಲ್ಲೇ ಆರಂಭವಾಗುವ ಬಾರ್‌ಗಳ ಬಗ್ಗೆ, ಮೊಬೈಲ್ ಫೋನ್ ರಿಪೇರಿಗೆ ಪಡೆದ ಸಂದರ್ಭ ಮಹಿಳೆಯರನ್ನು ಬ್ಲಾಕ್ ಮೇಲ್ ಮಾಡುತ್ತಿರುವ ಬಗ್ಗೆ ದೂರುಗಳು ಬಂದವು. ಕ್ರಮ ವಹಿಸುವುದಾಗಿ ಎಸ್ಪಿ ಭರವಸೆ ನೀಡಿದರು. ಡಿವೈಎಸ್ಪಿ ರವಿಕುಮಾರ್, ಇನ್ಸ್ ಪೆಕ್ಟರ್ ಗಳಾದ ಗೋವಿಂದರಾಜು, ದೀಪಕ್, ಅಬಕಾರಿ ಇನ್ಸ್ ಪೆಕ್ಟರ್ ವೆಂಕಟೇಶ್, ಅಜಯ್, ರವಿಕುಮಾರ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net