ಈ ಜಾಗೃತಿ ಕಾರ್ಯಕ್ರಮದ ಪ್ರಮುಖ ಭಾಗವಾಗಿ, ಮಣಿಪಾಲ್ ಆಸ್ಪತ್ರೆಯು ಇಪ್ಪತ್ತಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳಿಗೆ ಮೂಲಭೂತ ಜೀವರಕ್ಷಕ (Basic Life Support - BLS) ತರಬೇತಿ ನೀಡಿತು. ಯಾವುದೇ ವೈದ್ಯಕೀಯ ತುರ್ತು ಪರಿಸ್ಥಿತಿಗಳು ಎದುರಾದಾಗ ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಸ್ಪಂದಿಸಿ ಪ್ರಾಣ ರಕ್ಷಿಸಲು ಅಗತ್ಯವಿರುವ ಕೌಶಲ್ಯಗಳನ್ನು ಪತ್ರಕರ್ತರಿಗೆ ಈ ಮೂಲಕ ಒದಗಿಸಲಾಯಿತು. ಜತೆಗೆ ಪಾಲ್ಗೊಂಡಿದ್ದ ಇಪ್ಪತ್ತೈದಕ್ಕೂ ಹೆಚ್ಚು ಮಂದಿಗೆ ಮುನ್ನೆಚ್ಚರಿಕಾ ಆರೋಗ್ಯ ತಪಾಸಣಾ ಸೇವೆಗಳನ್ನು ಒದಗಿಸುವ ಮೂಲಕ, ರೋಗಗಳ ಆರಂಭಿಕ ಅಪಾಯದ ಮೌಲ್ಯಮಾಪನ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಆಸ್ಪತ್ರೆಯ ವೈದ್ಯಕೀಯ ತಂಡ ಯಶಸ್ವಿಯಾಗಿ ನಡೆಸಿತು.