ಸರಗೂರು ತಾಲೂಕಿನ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬುಧವಾರ ಭಕ್ತರು ಸರತಿಯಲ್ಲಿ ಸಾಗಿ ದೇವರ ದರ್ಶನ ಪಡೆದರು.
Published on:
Copied
Follow Us
ಸರಗೂರು: ತಾಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ಬುಧವಾರ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.
ದೇವಸ್ಥಾನದಲ್ಲಿ ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ, ಸೇರಿದಂತೆ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು. ಬೆಳಗ್ಗೆಯಿಂದಲೇ ದೇವರ ದರ್ಶನಕ್ಕೆ ದೇವಸ್ಥಾನಕ್ಕೆ ಭಕ್ತರು ಸರತಿಯಲ್ಲಿ ಸಾಗಿ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದ ಪಾರುತ್ತೇದಾರ್ ರಾಕೇಶ್ ಗೌಡ ಇದ್ದರು.