ಕೊಪ್ಪ ಕಾವೇರಿ ಮಾತೆ ಪ್ರತಿಮೆಗೆ ಹುಣ್ಣಿಮೆಯ ಪ್ರಯುಕ್ತ ವಿಶೇಷ ಪೂಜೆ ಮಾಡಲಾಯಿತು. ಭೆಬಿಂದ್ರ ಪ್ರಸಾದ್, ವಿಜೇಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ರುದ್ರೇಶ್, ತಿಲಕ್ ಪೂಜಾರಿ ಇದ್ದರು.
ಬೈಲುಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಬಿ ಎಂ ರಸ್ತೆ ಸಮೀಪದಲ್ಲಿರುವ ಕಾವೇರಿ ಮಾತೆ ಪ್ರತಿಮೆಗೆ ಹುಣ್ಣಿಮೆ ಪ್ರಯುಕ್ತ ವಿಶೇಷ ಪೂಜೆ ಭಾನುವಾರ ಸಂಜೆ ನೆರವೇರಿಸಲಾಯಿತು.
ಬಾರವಿ ಕಾವೇರಿ ಕನ್ನಡ ಸಂಘದ ಅಧ್ಯಕ್ಷ ಭೆಬಿಂದ್ರ ಪ್ರಸಾದ್ ಅವರ ಸಮ್ಮುಖದಲ್ಲಿ ಕಾವೇರಿ ಮಾತೆ ಪ್ರತಿಮೆಗೆ ವಿವಿಧ ಹೂಗಳಿಂದ ಅಲಂಕರಿಸಿ ಮಹಾ ಮಂಗಳಾರತಿ ನೆರೆವೇರಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು
ಬಾರವಿ ಕಾವೇರಿ ಕನ್ನಡ ಸಂಘದ ಭೆಬಿಂದ್ರ ಪ್ರಸಾದ್, ಮಾತನಾಡಿ ಕಾವೇರಿ ನದಿಯಲ್ಲಿ ನೀರು ಸಂಪೂರ್ಣ ಕುಸಿದಿದ್ದು. ತ್ಯಾಜ್ಯವನ್ನು ನದಿಗೆ ಹಾಕದಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.