ಮೂಗೂರು: ಇಲ್ಲಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಹಬ್ಬದ ನಿಮಿತ್ತ ವಿಶೇಷ ಪೂಜೆ ಆಯೋಜಿಸಲಾಗಿತ್ತು.
ಗ್ರಾಮದ ಗೌಡರ ಬೀದಿಯಲ್ಲಿರುವ ದೇವಾಲಯದಲ್ಲಿ ಹೋಮ ಹಾಗೂ ಧಾರ್ಮಿಕ ಆಚರಣೆಯೊಂದಿಗೆ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಬಳಿಕ ವೀರಭದ್ರೇಶ್ವರ ಸ್ವಾಮಿಗೆ ಮಹಾ ರುದ್ರಾಭಿಷೇಕ, ಹೂವಿನ ಅಲಂಕಾರದೊಂದಿಗೆ ವಿಶೇಷ ಪೂಜೆ, ಮಹಾ ಮಂಗಳಾರತಿ ನಡೆಯಿತು.
ಗುಡಿಹಟ್ಟಿ ಪುಟ್ಟಲಿಂಗಪ್ಪನ ಮಂಟೇಸ್ವಾಮಿ ವಿಶೇಷ ಪೂಜಾ ಕಾರ್ಯಕ್ರಮದ ಸೇವಾರ್ಥದಾರರಾಗಿದ್ದರು. ದೇಗುಲದ ಅರ್ಚಕ ಸುಂದ್ರಪ್ಪ ಅಕ್ಕೂರು ಅಭಿಷೇಕ್ ಇತರರಿದ್ದರು.