ಮೈಸೂರಿನ ಜೆಎಸ್‌ಎಸ್ ಪ.ಪೂ. ಕಾಲೇಜಿನಲ್ಲಿ ಕ್ರೀಡಾ ಚಟುವಟಿಕೆಗಳ ಸಮಾರೋಪ

ಮೈಸೂರಿನ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಎಂ.ಪಿ. ನಾಗಮ್ಮ,  ಪ್ರೊ.ಸುತ್ತೂರು ಎಸ್. ಮಾಲಿನಿ, ವೀಣಾ ಕುರುಬೂರು ಹಾಗೂ ಇತರರು ಇದ್ದರು.
ಮೈಸೂರಿನ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಎಂ.ಪಿ. ನಾಗಮ್ಮ, ಪ್ರೊ.ಸುತ್ತೂರು ಎಸ್. ಮಾಲಿನಿ, ವೀಣಾ ಕುರುಬೂರು ಹಾಗೂ ಇತರರು ಇದ್ದರು.
Published on
ಮೈಸೂರು: ಮಾನಸಿಕ ಮತ್ತು ದೈಹಿಕ ದೃಢತೆಗಾಗಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕಿ ಎಂ.ಪಿ. ನಾಗಮ್ಮ ಕರೆ ನೀಡಿದರು.
ನಗರದ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ವ್ಯಾಸಂಗದ ಜತೆಗೆ ಕಲೆ ಮತ್ತು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಸಾಧನೆ ತೋರಬೇಕು ಎಂದು ಕಿವಿಮಾತು ಹೇಳಿದರು.
ವೇದ ಕಾಲದಲ್ಲಿ ಹೆಣ್ಣಿಗೆ ಪೂಜ್ಯನೀಯ ಸ್ಥಾನವಿತ್ತು. ನಂತರ ಮನುಧರ್ಮಶಾಸ್ತ್ರವು ಸ್ತ್ರೀ ಸ್ವಾತಂತ್ರೃಕ್ಕೆ ಅರ್ಹಳಲ್ಲ ಎಂದು ಹೆಣ್ಣನ್ನು ಕೀಳಾಗಿ ಕಾಣಲಾರಂಭಿಸಲಾಯಿತು. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೆಣ್ಣಿಗೆ ಸಮಾನ ಅವಕಾಶಗಳು ದೊರೆತು ಆಕೆ ಇಂದು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ತೋರುತ್ತಿದ್ದಾಳೆ ಎಂದು ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗದ ಅಧ್ಯಕ್ಷೆ ಪ್ರೊ.ಸುತ್ತೂರು ಎಸ್. ಮಾಲಿನಿ ಮಾತನಾಡಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಕ್ರಿಯಾಶೀಲರನ್ನಾಗಿಸುತ್ತವೆ. ಒತ್ತಡ, ಖಿನ್ನತೆ, ಆವೇಶದ ಈ ಜಗತ್ತಿನಲ್ಲಿ ಕ್ರೀಡೆ ಮತ್ತು ಕಲೆಗಳಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಲು ಮುಖ್ಯ ಔಷಧವಾಗಿದೆ ಎಂದರು.
ಹದಿಹರಯದ ವಯಸ್ಸು ವಿದ್ಯಾರ್ಥಿಗಳನ್ನು ಪ್ರೀತಿ, ವ್ಯಾಮೋಹ, ಆಕರ್ಷಣೆ ಕಡೆಗೆ ಸೆಳೆಯುತ್ತದೆ. ಮೊಬೈಲ್ ಅದರ ಮೂಲವಾ ಗಿದೆ. ಮೊಬೈಲ್‌ಗೆ ದಾಸರಾಗುವ ಬದಲು ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಸಾಧನೆ ಮಾಡಬೇಕು. ಉನ್ನತ ಆದರ್ಶಗಳನ್ನು ಬೆಳೆಸಿಕೊಂಡು ಪಾಲಕರಿಗೆ ಮಾದರಿ ಮಕ್ಕಳಾಗಬೇಕು ಎಂದು ಕರೆ ನೀಡಿದರು.
ಕಿರುತೆರೆ ಕಲಾವಿದೆ ಎಚ್. ಅಶ್ವಿನ್ ಮಾತನಾಡಿ, ಆತ್ಮವಿಶ್ವಾಸವೇ ಸಾಧನೆಗೆ ಮೂಲವಾಗಿದೆ. ವಿವಿಧ ಕಲೆಗಳು ಬದುಕನ್ನು ಕಟ್ಟಿಕೊಡುತ್ತವೆ. ವಿದ್ಯಾರ್ಥಿಗಳಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಜೀವನ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಅಂತಾರಾಷ್ಟ್ರೀಯ ಖೋ-ಖೋ ಪಟು ವೀಣಾ ಕುರುಬೂರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯಕ್ಕೆ ನೀಡುವಷ್ಟು ಆದ್ಯತೆಯನ್ನು ಕ್ರೀಡೆಗೂ ನೀಡಬೇಕು. ಗುರಿಯ ಜತೆಗೆ ಗುರುವಿನ ಮಾರ್ಗದರ್ಶನ ಮುಖ್ಯ. ಸತತ ಪರಿಶ್ರಮದಿಂದ ಮಾತ್ರ ಯಾವುದೇ ಸಾಧನೆ ಸಾಧ್ಯ ಎಂದು ಹೇಳಿದರು.
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದರೆ ಸರ್ಕಾರದಿಂದ ಸ್ಕಾಲರ್‌ಶಿಪ್ ಪಡೆದು ಉನ್ನತ ವ್ಯಾಸಂಗದೊಂದಿಗೆ ಗುರಿ ಮುಟ್ಟಬಹುದು ಎಂದು ಸಲಹೆ ನೀಡಿದರು.
ಜೆಎಸ್‌ಎಸ್ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರೇಚಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ. ಗುರುಪಾದಸ್ವಾಮಿ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಕೆ. ಎಂ. ಶೋಭಾ, ಕ್ರೀಡಾ ಸಮಿತಿ ಸಂಚಾಲಕಿ ಎಂ.ಶಿವಕುಮಾರಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net