ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ ಸಹಕಾರಿ

ಸರಗೂರಿನ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಗ್ರಾಮಿಣ ದಸರಾ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಪಪಂ ಅಧ್ಯಕ್ಷೆ ಚೈತ್ರಾ ಸ್ವಾಮಿ ಉದ್ಘಾಟಿಸಿದರು. ವಿಶ್ವ, ಮಣಿಕಂಠ ಇತ್ತರರು ಇದ್ದರು.
ಸರಗೂರಿನ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಗ್ರಾಮಿಣ ದಸರಾ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಪಪಂ ಅಧ್ಯಕ್ಷೆ ಚೈತ್ರಾ ಸ್ವಾಮಿ ಉದ್ಘಾಟಿಸಿದರು. ವಿಶ್ವ, ಮಣಿಕಂಠ ಇತ್ತರರು ಇದ್ದರು.
Published on
ಸರಗೂರು: ಕ್ರೀಡಾಕೂಟಗಳು ಗ್ರಾಮೀಣ ಭಾಗದ ಆಟಗಾರರಿಗೆ ಉತ್ತಮ ವೇದಿಕೆಯಾಗಿವೆ ಎಂದು ಪಪಂ ಅಧ್ಯಕ್ಷೆ ಚೈತ್ರಾ ಸ್ವಾಮಿ ಹೇಳಿದರು.
ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಗುಂಡು ಎಸೆಯುವ ಮೂಲಕ ಶನಿವಾರ ಗ್ರಾಮೀಣ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳು ಹಾಗೂ ಯುವ ಕ್ರೀಡಾಪಟುಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಗ್ರಾಮೀಣ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.
ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳುವುದರ ಜತೆಗೆ ಆರೋಗ್ಯಕರ ಜೀವನಶೈಲಿಗೂ ಕ್ರೀಡೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ದಸರಾ ಆಯೋಜಕರಾದ ವಿಶ್ವ, ಶಿವಪ್ಪ, ಸೇವಾದಳ ಅಧ್ಯಕ್ಷ ಮಣಿಕಂಠ, ಶಿಕ್ಷಕರಾದ ಜಯಚಂದ್ರ, ಮಹೇಶ್, ಮುಖಂಡ ಸ್ವಾಮಿ ಸೇರಿದಂತೆ ಮುಖಂಡರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net