ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾ.ರಾ.ಮಹೇಶ್ ಮುಂದಿನ ಅಭ್ಯರ್ಥಿ

ಕೆ.ಆರ್.ನಗರದಲ್ಲಿ ಮಾಧ್ಯಮದರೊಂದಿಗೆ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿದರು.
ಕೆ.ಆರ್.ನಗರದಲ್ಲಿ ಮಾಧ್ಯಮದರೊಂದಿಗೆ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿಕೆ
ಕೆ.ಆರ್.ನಗರ: ಮುಂದಿನ ಚುನಾವಣೆಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದ ಅಭ್ಯರ್ಥಿ. ಹೀಗೆಂದು ನಾನು ಹೇಳುತ್ತಿಲ್ಲ, ಚಾಮುಂಡೇಶ್ವರಿ ಕ್ಷೇತ್ರದ ಬಹುತೇಕ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಮತದಾರರೇ ಹೇಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.
ಪಟ್ಟಣದ ಎಚ್.ಡಿ.ದೇವೇಗೌಡ ಸಮುದಾಯ ಭವನದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಗೆದ್ದು ಪಕ್ಷ ನಿಷ್ಠೆ ತೋರಿಸದೇ, ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡದೇ, ಬೇರೊಂದು ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ, ಒಲೈಕೆ ಮಾಡುವುದರ ಜತೆಗೆ ನಮ್ಮ ಪಕ್ಷದ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದು ಎಷ್ಟು ಸರಿ ಎಂದು ಪರೋಕ್ಷವಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ನಡೆಯನ್ನು ಖಂಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳದೇ ಇವರೇ ಚಾಮುಂಡಿ ಬೆಟ್ಟದಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಒಲೈಕೆಗಾಗಿ ನಮ್ಮ ನಾಯಕರಾದ ಎಚ್.ಡಿ.ಕುಮಾರ ಸ್ವಾಮಿ ಅವರ ರಾಜೀನಾಮೆ ಕೇಳುತ್ತಾರೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆ ಮಾಡಲು ನಮ್ಮ ನಾಯಕರಾದ ಮಾಜಿ ಸಚಿವ ಸಾ.ರಾ.ಮಹೇಶ್ ಅವರನ್ನು ಕಣಕ್ಕಳಿಸಲು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರದ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net