ಪರಿವರ್ತನೆಗಾಗಿ ಹೋರಾಡಿದ ಕಾಯಕಯೋಗಿ ಬಸವಣ್ಣ

ಸರಗೂರು ತಾಲೂಕಿನ ಪಟ್ಟಣದ ಜೆಎಸ್‌ಎಸ್ ಶಾಲೆಯ ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಸ್ವಾಮೀಜಿಗಳು ಉದ್ಘಾಟಿಸಿದರು. ಕೆಇಬಿ ಕಚೇರಿ ಮುಂಭಾಗದಲ್ಲಿ ಸೂತ್ತೂರು ಶ್ರೀಗಳು ಚಾಲನೆ ನೀಡಿದರು. ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಸರಗೂರು ತಾಲೂಕಿನ ಪಟ್ಟಣದ ಜೆಎಸ್‌ಎಸ್ ಶಾಲೆಯ ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಸ್ವಾಮೀಜಿಗಳು ಉದ್ಘಾಟಿಸಿದರು. ಕೆಇಬಿ ಕಚೇರಿ ಮುಂಭಾಗದಲ್ಲಿ ಸೂತ್ತೂರು ಶ್ರೀಗಳು ಚಾಲನೆ ನೀಡಿದರು. ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
Published on
ಸರಗೂರು: ಸಮಾಜದ ಪರಿವರ್ತನೆಗಾಗಿ ಹೋರಾಡಿದ ಕಾಯಕಯೋಗಿ ಬಸವಣ್ಣನವರ ತತ್ವ, ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ದೇವನೂರು ಗುರು ಮಲ್ಲೇಶ್ವರ ಮಠದ ಶ್ರೀ ಮಹಾಂತ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಜೆಎಸ್‌ಎಸ್ ಶಾಲಾ ಆವರಣದಲ್ಲಿ ಮಂಗಳವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಬಳಗ ಮತ್ತು ಸರಗೂರು ತಾಲೂಕು ಯುವ ಘಟಕದಿಂದ ಆಯೋಜಿಸಿದ್ದ ಶ್ರೀ ಬಸವೇಶ್ವರ ಜಯಂತಿ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಬಸವನ ಬಾಗೇವಾಡಿಯಲ್ಲಿ ಜನಿಸಿದ ಬಸವಣ್ಣ ಶಾಂತ ವಾತಾವರಣದಲ್ಲಿ ಬೆಳೆದು, ರಾಜ ಬಿಜ್ಜಳನ ಆಸ್ಥಾನದಲ್ಲಿ ಕೆಲಸ ಮಾಡುತ್ತಾ ಆದರ್ಶ ಪೂರಕವಾದ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದರು. ಸಮಸಮಾಜಕ್ಕೆ ವಚನಗಳನ್ನು ಕೊಡುಗೆ ನೀಡಿದ ಅವರ ಬೋಧನೆಗಳು ಇಂದಿಗೂ ಅವಶ್ಯಕವಾಗಿದ್ದು, ಎಲ್ಲರೂ ಅನುಸರಿಸಬೇಕು. ಮುಂದುವರಿಸಿಕೊಂಡು ಹೋಗಬೇಕು ಎಂದು ಹೇಳಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪ ಮಾತನಾಡಿ, ಬಸವಣ್ಣನವರು ಜಾತಿಪದ್ಧ್ದತಿ ನಿರ್ಮೂಲನೆಗೆ ಪಣತೊಟ್ಟು, ಸಕಲ ಜೀವಿಗಳಿಗೂ ಒಳಿತು ಬಯಸಿದ್ದರು. ವಚನಗಳ ಮೂಲಕ ಕಾಯಕ ಸಿದ್ಧಾಂತ, ದಾಸೋಹ ಮತ್ತು ಶಿಕ್ಷಣವನ್ನು ವಿಶ್ವಕ್ಕೆ ಸಾರಿದ್ದಾರೆ ಎಂದರು.
ಸುತ್ತೂರು ಮಠದ ಶ್ರೀ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಬಸವೇಶ್ವರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು. ಬಿಡುಗಲು ಪಡುವಲು ವಿರಕ್ತ ಮಠದ ಮಹದೇವಸ್ವಾಮೀಜಿ, ಹಂಚೀಪುರ ಮಠದ ಚನ್ನಬಸವಸ್ವಾಮೀಜಿ, ದಡದಹಳ್ಳಿ ಮಠದ ಷಡಕ್ಷರಿಸ್ವಾಮೀಜಿ, ಹಂಚೀಪುರ ಮಠದ ಕಿರಿಯ ಶ್ರೀ ತೋಂಟದಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜು, ತಾಲೂಕು ಅಧ್ಯಕ್ಷ ವೀರಭದ್ರಪ್ಪ, ಜೆಡಿಎಸ್ ಮುಖಂಡ ಜಯಪ್ರಕಾಶ್, ಸಮಾಜ ಸೇವಕಿ ಸುಧಾ ಮೃತ್ಯುಂಜಯಪ್ಪ, ತಹಸೀಲ್ದಾರ್ ಮೋಹನಕುಮಾರಿ, ವರುಣಾ ಮಹೇಶ್ ಮಾತನಾಡಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಉದ್ಯಮಿ ಯು.ಎಸ್.ಶೇಖರ್, ಪಪಂ ಉಪಾಧ್ಯಕ್ಷ ಶಿವಕುಮಾರ್, ಕೆಎಂಎಫ್ ನಿರ್ದೇಶಕ ಎಸ್.ಸಿ.ಅಶೋಕ್, ಜೆಡಿಎಸ್ ಮುಖಂಡ ಕೃಷ್ಣನಾಯಕ, ಕೋಟೆ ಮಹಾಸಭಾ ಅಧ್ಯಕ್ಷ ರುದ್ರಪ್ಪ, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಸದಾನಂದ, ಮಾಜಿ ಜಿಲ್ಲಾಧ್ಯಕ್ಷ ಕಾನ್ಯ ಶಿವಮೂರ್ತಿ, ನಿರ್ದೇಶಕ ಮೊತ್ತ ಬಸವರಾಜಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಧನ್ಯಾ ಸತ್ಯಂದ್ರಮೂರ್ತಿ, ಮಹಾಸಭಾ ಉಪಾಧ್ಯಕ್ಷ ಬಿ.ವಿ.ಬಸವರಾಜು, ಜಿಲ್ಲಾ ಕಾರ್ಯದರ್ಶಿ ಕೆ.ಗಿರಿ ಕುಮಾರ್, ಮಾಜಿ ಅಧ್ಯಕ್ಷ ಡಿ.ಜಿ. ಶಿವರಾಜು, ಮಹದೇವಪ್ಪ, ಮಹಾಸಭಾ ಕಾರ್ಯಾಧ್ಯಕ್ಷ ಸಿ.ಕೆ.ಗಿರೀಶ್, ಟೌನ್ ಅಧ್ಯಕ್ಷ ಮೋಹನ್ ಕುಮಾರ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಾದಪ್ಪ, ಮುಖಂಡರಾದ ಅಣ್ಣಯ್ಯಸ್ವಾಮಿ, ಡಿ.ಸಿ.ಸಿದ್ದಪ್ಪ, ಮಂಜುಳಾ, ಎಸ್.ಎನ್.ಪ್ರಕಾಶ್, ಬಸವ ಬಳಗ ಅಧ್ಯಕ್ಷ ಗಣಪತಿ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ, ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ, ಕಾರ್ಯದರ್ಶಿ ಬಸವರಾಜು, ಜಯಕುಮಾರ್, ಯುವ ಘಟಕದ ಅಧ್ಯಕ್ಷ ಪಿ.ನಂದೀಶ, ನಿರ್ದೇಶಕರಾದ ಎಚ್.ಸಿ.ಮಹದೇವಸ್ವಾಮಿ, ಮಾದಪ್ಪ, ವೀರೂಪಾಕ್ಷ, ಶ್ರೀಕಂಠ, ಮಂಜುನಾಥ, ಲಿಂಗರಾಜು, ಸುರೇಶ್, ವಿಕೇಶ್, ಪುಟ್ಟಮ್ಮ, ನೀಲಮ್ಮ, ಪುಟ್ಟಮಣಿ, ನಾಗರತ್ನಾ, ಬಸವ ಬಳಗದ ಸದಸ್ಯರಾದ ನೀಲಕಂಠ, ಶಿವರಾಜಪ್ಪ, ಮಂಜಪ್ಪ, ಚನ್ನಬಸವ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net