ಸಮಾಜದ ಒಳಿತಿಗೆ ದುಡಿದ ಕರ್ಪೂರಹಳ್ಳಿ ಮಠ

ಸಾಲಿಗ್ರಾಮ ತಾಲೂಕು ಕರ್ಪೂರವಳ್ಳಿ ಗ್ರಾಮದ ಜಂಗಮ ಮಠದಲ್ಲಿ ಆಯೋಜಿಸಿದ್ದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು.
ಸಾಲಿಗ್ರಾಮ ತಾಲೂಕು ಕರ್ಪೂರವಳ್ಳಿ ಗ್ರಾಮದ ಜಂಗಮ ಮಠದಲ್ಲಿ ಆಯೋಜಿಸಿದ್ದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು.
Published on
ಸಾಲಿಗ್ರಾಮ: ಯಾವುದೇ ತಾರತಮ್ಯವಿಲ್ಲದೆ ಸಮಾಜದ ಒಳಿತಿಗೆ ದುಡಿದ ಕರ್ಪೂರಹಳ್ಳಿ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಬದುಕು ನಮಗೆಲ್ಲ ಆದರ್ಶವಾಗಿ ಉಳಿದಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಜಂಗಮ ಮಠದಲ್ಲಿ ಇತ್ತೀಚೆಗೆ ನಡೆದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಠದ ಬೆಳವಣಿಗೆಗಾಗಿ ಹಗಲಿರುಳು ಶ್ರಮಿಸಿ ಮಠದ ಉತ್ತರಾಧಿಕಾರಿ ನೇಮಿಸಬೇಕು ಎನ್ನುವಷ್ಟರಲ್ಲಿ ಅವರು ನಮ್ಮನ್ನು ಅಗಲಿದ್ದು ನೋವಿನ ಸಂಗತಿ. ಅವರ ಉತ್ತರಾಧಿಕಾರಿಯಾಗಿರುವ ಶ್ರೀ ಅಭಿನವ ಚಂದ್ರಶೇಖರ ಶಿವಾಚಾರ್ಯರು ಮಠವನ್ನು ಇನ್ನಷ್ಟು ಅಭಿವೃದ್ಧಿ ಮಾಡಲಿ ಎಂದು ಆಶಿಸಿದರು.
ಮಠದ ಸುತ್ತ ಕಾಂಪೌಂಡ್ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲಾಗುವುದು. ಮಠದ ಆಸ್ತಿ ಮತ್ತು ದಾಖಲೆಗಳನ್ನು ನೂತನ ಶ್ರೀಗಳ ಹೆಸರಿಗೆ ಹಸ್ತಾಂತರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಯಡಿಯೂರು ಮಠದ ಶ್ರೀರೇಣುಕ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮಾಜ ಮತ್ತು ಮಾನವನ ಅಭಿವೃದ್ಧಿ ಎರಡನ್ನು ಒಟ್ಟಿಗೆ ಕೊಂಡೊಯ್ಯಬೇಕಾದ ಜವಾಬ್ದಾರಿ ಮಠಗಳಿಗೆ ಇದೆ. ಕರ್ಪೂರವಳ್ಳಿ ಮಠ ಆ ದಿಕ್ಕಿನಲ್ಲಿ ಕ್ರಮಿಸಲಿ ಎಂದು ತಿಳಿಸಿದರು.
ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್, ಹಾಡ್ಯ ಮಹದೇವಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಗಾವಡಗೆರೆ ಮಠದ ಶ್ರೀ ನಟರಾಜ ಸ್ವಾಮೀಜಿ, ಅಂಕನಹಳ್ಳಿ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಶ್ರೀ ಮೃತ್ಯುಂಜಯ ಸ್ವಾಮೀಜಿ, ಜಯದೇವ ತಾಯಿ, ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಕರ್ಪೂರವಳ್ಳಿ ಮಠದ ಉತ್ತರಾಧಿಕಾರಿ ಶ್ರೀ ಅಭಿನವ ಚಂದ್ರಶೇಖರ ಶಿವಚಾರ್ಯ ಸ್ವಾಮೀಜಿ, ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ನಗರ ಅಧ್ಯಕ್ಷ ಪ್ರಭಾಕರ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗಾಯನಳ್ಳಿ ಕುಮಾರಸ್ವಾಮಿ, ಕೆಡಗ ನಟರಾಜ್, ರಾಜಶೇಖರ, ನಟರಾಜ, ಲಿಂಗಪ್ಪ, ಶ್ರೀನಿವಾಸ್, ಲೋಕೇಶ, ಪೂರ್ಣಚಂದ್ರ, ಸಿದ್ದೇಶ್, ಜಬೀರ್, ಸಿದ್ದೇಶ್, ನಂದೀಶ್, ಸಿದ್ದು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net