ಕಾಳಮ್ಮನ ಕೊಪ್ಪಲಿನಲ್ಲಿ ಗ್ರಾಮದೇವತೆ ಶ್ರೀಕಾಳಮ್ಮ ದೇವಿ ರಥೋತ್ಸವ ಜರುಗಿತು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
Brahmarathotsava
ಸಾಲಿಗ್ರಾಮ: ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀಕಾಳಮ್ಮ ತಾಯಿ ದೇವರ ಬ್ರಹ್ಮರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.
ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳು ಜರುಗಿದವು. ಗ್ರಾಮದ ವಿವಿಧ ರಸ್ತೆಗಳು ಹಾಗೂ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ದೇವರಿಗೆ ವಿವಿಧ ಅಭಿಷೇಕಗಳನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವರ ಮೂರ್ತಿಯನ್ನು ಶೃಂಗಾರಗೊಂಡಿದ್ದ ರಥದಲ್ಲಿ ಪ್ರತಿಷ್ಠಾಪಿಸಿದರು. ರಥೋತ್ಸವಕ್ಕೆ ಶಾಸಕ ಡಿ ರವಿಶಂಕರ್, ತಹಸೀಲ್ದಾರ್ ರುಕೀಯಾ ಬೇಗಂ, ಗ್ರಾಪಂ ಸದಸ್ಯ ಡಿ. ಕೃಷ್ಣ, ದಮಯಂತಿ, ಮಾದೇವ್ ಮತ್ತು ಗ್ರಾಮದ ಯಜಮಾನರು ಚಾಲನೆ ನೀಡಿದರು.
ಭಕ್ತರು ರಥಕ್ಕೆ ಹಣ್ಣು ದವನ ಎಸೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಜಿಲ್ಲೆ ಮತ್ತು ಹೊರ ತಾಲೂಕುಗಳಿಂದ ಆಗಮಿಸಿದ್ದ ಸಹಸ್ರಾರು ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ರಥೋತ್ಸವದ ಅಂಗವಾಗಿ ಶ್ರೀಕಾಳಿಕಾಂಬದೇವಿಯ ಕೃಪಾಪೋಷಿತ ನಾಟಕ ಮಂಡಳಿಯ ವತಿಯಿಂದ ಶನಿಪ್ರಭಾವ ಪೌರಾಣಿಕ ನಾಟಕ ಪ್ರದರ್ಶನ ಶುಕ್ರವಾರ ರಾತ್ರಿ ನಡೆಯಿತು.