ನಿಮ್ಹಾನ್ಸ್ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ

ನಿಮ್ಹಾನ್ಸ್ ಕಟ್ಟಡ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪೌರ ಕಾರ್ಮಿಕರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಒಕ್ಕೂಟದ ಅಧ್ಯಕ್ಷ ಡಿ.ಆರ್.ರಾಜು, ಪ್ರಧಾನ ಕಾರ್ಯದರ್ಶಿ ದಿನೇಶ್‌ಕುಮಾರ್, ಸಲಹೆಗಾರ ಶಿವ ಶ್ರೀನಿವಾಸ್, ಸಿ.ಆರ್.ವಿಜಯ್, ಅಂಜಲಿ, ವಸಂತಕುಮಾರಿ, ಪವಿತ್ರಾ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ಪೌರಕಾರ್ಮಿಕರ ಸಂಘಟನೆಗಳ ಒತ್ತಾಯ
ತಾಲೂಕಿನ ಗುಡುಮಾದನಹಳ್ಳಿಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ (ನಿಮ್ಹಾನ್ಸ್) ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ಪೌರ ಕಾರ್ಮಿಕರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರ ಬೆಂಗಳೂರು ಮಾದರಿಯಲ್ಲಿ ಮೈಸೂರು ಭಾಗದಲ್ಲಿಯೂ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಇದಕ್ಕಾಗಿ 2025-26ನೇ ಸಾಲಿನ ಆಯವ್ಯಯದಲ್ಲಿ 100 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಈ ಆಸ್ಪತ್ರೆ ನಿರ್ಮಾಣವಾದರೆ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಈಗಾಗಲೇ ಆರೋಗ್ಯ ಇಲಾಖೆಗೆ ಭೂಮಿ ಹಸ್ತಾಂತರವಾಗಿರುವುದರಿಂದ ಯಾವುದೇ ಒತ್ತಡ, ಪ್ರತಿಭಟನೆಗಳಿಗೂ ಮಣಿಯದೆ ಕೂಡಲೇ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಡಿ.ಆರ್.ರಾಜು, ಪ್ರಧಾನ ಕಾರ್ಯದರ್ಶಿ ದಿನೇಶ್‌ಕುಮಾರ್, ಸಲಹೆಗಾರ ಶಿವ ಶ್ರೀನಿವಾಸ್, ಸಿ.ಆರ್.ವಿಜಯ್, ಅಂಜಲಿ, ವಸಂತಕುಮಾರಿ, ಪವಿತ್ರಾ ಸೇರಿದಂತೆ ಹಲವರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net