ವಾಸುಗೆ ರಾಜ್ಯ ಉತ್ತಮ ಉಪನ್ಯಾಸಕ ಪ್ರಶಸ್ತಿ

ವಾಸು
ವಾಸು
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಎಚ್.ಬಿ ವಾಸು 2026-27ನೇ ಸಾಲಿನ ರಾಜ್ಯ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಸ್ತುತ ಮೈಸೂರಿನ ಕುವೆಂಪುನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿರುವ ವಾಸು, 2001ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ್ದರು. 2009ರಲ್ಲಿ ಕೆಪಿಎಸ್‌ಸಿ ಮೂಲಕ ಸರ್ಕಾರಿ ಉಪನ್ಯಾಸಕರಾಗಿ ಆಯ್ಕೆಯಾಗಿದ್ದರು. ಮೈಸೂರು ಜಿಲ್ಲಾ ಇತಿಹಾಸ ವೇದಿಕೆ ಅಧ್ಯಕ್ಷರಾಗಿರುವ ಅವರು, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶ್ನೆಪತ್ರಿಕೆ ಹಾಗೂ ಇತಿಹಾಸ ಕೈಪಿಡಿಗಳ ತಯಾರಿಕೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯ, ರಂಗಭೂಮಿ, ಸಂಗೀತ, ನಿರೂಪಣೆ ಹಾಗೂ ಭಾಷಣ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ.
ಸೆ.5ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿರುವ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net