ರಾಜ್ಯ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ)ಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಮಂಜು ಕಿರಣ್, ಶಿರಮಳ್ಳಿ ಮಂಜುನಾಥ್, ಗಣಗರಹುಂಡಿ ವೆಂಕಟೇಶ್, ಸಿಂಧುವಳ್ಳಿ ವೇಣು, ಚೋರನಹಳ್ಳಿ ಮಹಾದೇವ, ಮುದ್ದಳ್ಳಿ ಗುರುಸ್ವಾಮಿ, ದೂರ ವೆಂಕಟೇಶ್, ವಸಂತ, ಶೈಲಜಾ ಇತರರು ಇದ್ದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ)ಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಮಂಜು ಕಿರಣ್, ಶಿರಮಳ್ಳಿ ಮಂಜುನಾಥ್, ಗಣಗರಹುಂಡಿ ವೆಂಕಟೇಶ್, ಸಿಂಧುವಳ್ಳಿ ವೇಣು, ಚೋರನಹಳ್ಳಿ ಮಹಾದೇವ, ಮುದ್ದಳ್ಳಿ ಗುರುಸ್ವಾಮಿ, ದೂರ ವೆಂಕಟೇಶ್, ವಸಂತ, ಶೈಲಜಾ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಟೌನ್‌ಶಿಪ್, ಕೈಗಾರಿಕೆ ಅಭಿವೃದ್ಧಿ ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬಲವಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು
  • ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಉಂಟಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಬರ ಪರಿಹಾರ ಬಿಡುಗಡೆ ಮಾಡಬೇಕು
ಮೈಸೂರು:ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ)ಯಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಸಿದ್ಧಾರ್ಥ ಬಡಾವಣೆಯ ಜಿಲ್ಲಾಧಿಕಾರಿ ಹೊಸ ಕಚೇರಿ ಬಳಿ ಪ್ರತಿಭಟನೆ ನಡೆಸಿ, ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಟೌನ್‌ಶಿಪ್, ಕೈಗಾರಿಕೆ ಅಭಿವೃದ್ಧಿ ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬಲವಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು. ಭೂ ಸುಧಾರಣೆ ಕಾಯ್ದೆಗೆ ತರಲಾಗಿರುವ ತಿದ್ದುಪಡಿ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಉಂಟಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಬರ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ವಿಮೆ ಯೋಜನೆಯಲ್ಲಿನ ಗೊಂದಲಗಳನ್ನು ನಿವಾರಿಸಿ, ಗ್ರಾಮೀಣ ಪ್ರದೇಶದಲ್ಲಿ ಜನಗಣತಿ ಹಾಗೂ ಎಸ್‌ಐಆರ್ ಮಾದರಿಯಲ್ಲೇ ಸಮಗ್ರ ಬೆಳೆ ವಿಮೆ ಅಭಿಯಾನವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಭಾರತ-ಅಮೆರಿಕ ಮುಕ್ತ ವಾಣಿಜ್ಯ ಒಪ್ಪಂದವನ್ನು ಪುನಃ ಜಾರಿಗೆ ತರಲು ನಡೆಯುತ್ತಿರುವ ಪ್ರಯತ್ನ ಖಂಡನೀಯ. ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಮುಕ್ತ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಬಾರದು. ಮೈಸೂರು ತಾಲೂಕಿನ ದೂರ, ಚೋರನಹಳ್ಳಿ ಹಾಗೂ ಮಾರ್ಬಳ್ಳಿ ಗ್ರಾಮಗಳ ಸಾಗುವಳಿ ಚೀಟಿ ದುರಸ್ತಿ ಪ್ರಕ್ರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ರೈತರು ಪಡೆದಿರುವ ಪ್ರಸಕ್ತ ಹಾಗೂ ಹಿಂದಿನ ಸಾಲಿನ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಅಲ್ಲದೆ, ಹಿಂದಿನ ವರ್ಷಗಳಲ್ಲಿ ಪಡೆದಿರುವ ಕೃಷಿ ಸಾಲಗಳಿಗೆ ಮುಂದಿನ ಎರಡು ವರ್ಷಗಳವರೆಗೆ ಬಡ್ಡಿ ವಿಧಿಸದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆದೇಶ ಹೊರಡಿಸಲಿ ಎಂದು ಕೋರಿದರು.
ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜು ಕಿರಣ್, ಶಿರಮಳ್ಳಿ ಮಂಜುನಾಥ್, ಗಳಿಗರಹುಂಡಿ ವೆಂಕಟೇಶ್, ಸಿಂಧುವಳ್ಳಿ ವೇಣು, ಚೋರನಹಳ್ಳಿ ಮಹಾದೇವ, ಮುದ್ದಳ್ಳಿ ಗುರುಸ್ವಾಮಿ, ದೂರ ವೆಂಕಟೇಶ್, ವಸಂತ, ಶೈಲಜಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net