ಮೈಸೂರಿನಲ್ಲಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ

ಸುವರ್ಣ ಬೆಳಕು ಫೌಂಡೇಷನ್ ಮೈಸೂರು ನಗರದ ಶ್ರೀಕಾಂತ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯನ್ನು  ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಉದ್ಘಾಟಿಸಿದರು.  ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಎಸ್. ಮಹೇಶ್,ವಿಮಲ ವೀರೇಶ್ ಹಾಗೂ ಇತರರು ಇದ್ದರು.

Published on
ಮೈಸೂರು: ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ನಗರದ ಶ್ರೀಕಾಂತ ವಿದ್ಯಾಸಂಸ್ಥೆಯಲ್ಲಿ ಭಾನುವಾರ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ, ಯೋಗರತ್ನ ಹಾಗೂ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.
ಯೋಗ ವಿತ್ ಶ್ರೀನಾಥ್ ಸಂಸ್ಥೆ ಸಂಸ್ಥಾಪಕ ಶ್ರೀನಾಥ್ ಮಾತನಾಡಿ, ಯೋಗವನ್ನು ಭಾರತ ವಿಶ್ವಕ್ಕೆ ಪರಿಚಯಿಸಿತು. ವಿಶ್ವದ ಹಲವಾರು ರಾಷ್ಟ್ರಗಳು ಯೋಗದ ಪ್ರಯೋಜನ ಪಡೆದುಕೊಳ್ಳುತ್ತಿದೆ. ವಿದೇಶಿಯರಿಗೆ ಹೋಲಿಕೆ ಮಾಡಿದರೆ ಭಾರತೀಯರು ಯೋಗದ ಪ್ರಯೋಜ ನವನ್ನು ಹೆಚ್ಚಾಗಿ ಪಡೆಯುತ್ತಿಲ್ಲ. ನಮ್ಮಲ್ಲಿ ಯೋಗಾಭ್ಯಾಸ ಮಾಡುವವರ ಸಂಖ್ಯೆ ವೃದ್ಧಿಸಬೇಕಾಗಿದೆ ಎಂದು ಹೇಳಿದರು.
ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ವಿವಿ ಕ್ರಿಯೇಷನ್ಸ್ ಸಂಸ್ಥೆ ಅಧ್ಯಕ್ಷೆ ವಿಮಲ ವೀರೇಶ್, ಮೇಲುಕೋಟೆ ವಂಗೀಪುರ ಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಸಮಾಜ ಸೇವಕ ಮೋಹನ್, ಸುವರ್ಣ ಬೆಳಕು ಫೌಂಡೇಷನ್ ಗೌರವಾಧ್ಯಕ್ಷ ಎಸ್. ಮಹೇಶ್ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net