ವಿದ್ಯುತ್ ಕ್ಷೇತ್ರ ಖಾಸಗೀಕರಣಕ್ಕೆ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ತೀವ್ರ ವಿರೋಧ

ವಿದ್ಯುತ್ ವಿತರಣೆ ವ್ಯವಸ್ಥೆಯನ್ನು ಖಾಸಗಿಗೆ ವಹಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ಮನವಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹಳ್ಳಿಕೆರೆಹುಂಡಿ ಭಾಗ್ಯರಾಜ್, ಎಚ್.ಎಸ್.ರಾಜು, ಒಳಗೆರೆ ಗಣೇಶ, ಕೆರೆಹುಂಡಿ ರಾಜಣ್ಣ, ಹಾಲಿನ ನಾಗರಾಜ್, ಹನುಮಯ್ಯ ಎಚ್.ಪ್ರಕಾಶ್, ಗಾಂಧಿ ಮಲಿಯೂರು, ಮಹೇಂದ್ರ, ಸೋಮಣ್ಣ, ಅಂಡುವಿನಹಳ್ಳಿ ಮಹೇಶ್ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯುತ್ ಪೂರೈಕೆಯು ಸರ್ಕಾರದ ಜವಾಬ್ದಾರಿ
  • ಸಮರ್ಪಕವಾದ ವಿದ್ಯುತ್ ಪೂರೈಕೆಯಾಗದೆ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತದೆ
ಮೈಸೂರು: ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ನಿರ್ವಹಿಸುತ್ತಿರುವ ವಿದ್ಯುತ್ ವಿತರಣೆ ವ್ಯವಸ್ಥೆಯನ್ನು ಖಾಸಗೀಕರಣ ಮಾಡಿದರೆ ಕೃಷಿ ಮತ್ತು ರೈತ ವರ್ಗಕ್ಕೆ ಭಾರಿ ನಷ್ಟ ಉಂಟಾಗುತ್ತದೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಹೇಳಿದರು.
ಹಿನಕಲ್‌ನಲ್ಲಿರುವ ಸೆಸ್ಕ್ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೃಷಿ ಉತ್ಪನ್ನ ಕುಂಠಿತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಖಾಸಗೀಕರಣ ಕೈ ಬಿಡುವಂತೆ ಒತ್ತಾಯಿಸಿದರು.
ವಿದ್ಯುತ್ ಪೂರೈಕೆಯು ಸರ್ಕಾರದ ಜವಾಬ್ದಾರಿಯಾಗಿದ್ದು, ಇದನ್ನು ಖಾಸಗಿ ಕಂಪನಿಗಳು ವಹಿಸಿಕೊಂಡಲ್ಲಿ ನಿಯಮ ಮತ್ತು ಷರತ್ತುಗಳನ್ನು ಹಾಕುತ್ತಾರೆ. ಇದರಿಂದ ಸಮರ್ಪಕವಾದ ವಿದ್ಯುತ್ ಪೂರೈಕೆಯಾಗದೆ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತದೆ ಎಂದರು.
ರೈತರು ಕೃಷಿ ಬಿಟ್ಟು ಹೊರಬರುವುದನ್ನೇ ಕಾಯುತ್ತಿರುವ ಬಂಡವಾಳ ಶಾಹಿಗಳು, ಭೂಮಿಯನ್ನು ಆಕ್ರಮಿಸಿ ಮೂಲ ಕೃಷಿಕರನ್ನು ಕೂಲಿ ಕಾರ್ಮಿಕರಂತೆ ನೇಮಿಸಿಕೊಳ್ಳುತ್ತಾರೆ. ಆದ್ದರಿಂದ ವಿದ್ಯುತ್ ಖಾಸಗೀಕರಣವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಸಂಘದ ಎಚ್.ಎಸ್.ರಾಜು, ಒಳಗೆರೆ ಗಣೇಶ, ಕೆರೆಹುಂಡಿ ರಾಜಣ್ಣ, ಹಾಲಿನ ನಾಗರಾಜ್, ಹನುಮಯ್ಯ ಎಚ್.ಪ್ರಕಾಶ್, ಗಾಂಧಿ ಮಲಿಯೂರು, ಮಹೇಂದ್ರ, ಸೋಮಣ್ಣ, ಅಂಡುವಿನಹಳ್ಳಿ ಮಹೇಶ್, ಬಿದರಳ್ಳಿ ಮಾದಪ್ಪ, ಸ್ಯಾಂಡ್ ಹಳ್ಳಿ ಬಸವರಾಜು, ನಾಗರಾಜಪ್ಪ, ಕಿಲ್ಲಪುರ ನಂದೀಶ್, ಕೆರಹಳ್ಳಿ ರವಿ, ದೇವಿರಮ್ಮನಹಳ್ಳಿ ಪುಟ್ಟಸ್ವಾಮಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net