ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

Student
Student
Published on
ನಗರದ ವರ್ತುಲ ರಸ್ತೆಯ ಮಾನಸಿನಗರದ ಬಳಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯಚೂರು ಮೂಲದ ಸುಮೀತ್(23) ಮೃತ ವಿದ್ಯಾರ್ಥಿ. ಧನಂಜಯ, ರೇವಂತ್, ಪವನ್, ಪ್ರಜ್ವಲ್ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಕಾಲೇಜಿನ ಪ್ರಥಮ ವರ್ಷದ ಎಂ.ಟೆಕ್‌ನ ಐವರು ವಿದ್ಯಾರ್ಥಿಗಳು ಕಾರಿನಲ್ಲಿ ಮಂಗಳವಾರ ರಾತ್ರಿ ಸಾತಗಳ್ಳಿ ಕಡೆಗೆ ಹೊರಟಿದ್ದರು. ಅತಿ ವೇಗದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿದ್ದಾರ್ಥನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net