ವಿದ್ಯಾರ್ಥಿಗಳಿಂದ ಶಿಕ್ಷಣ ಸಂಸ್ಥೆಗಳ ಪ್ರಗತಿ: ಪ್ರೊ.ಕೆ.ಎಸ್.ಸುರೇಶ್ ಅಭಿಮತ

ಕುವೆಂಪುನಗರದ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಆಯೋಜಿಸಿದ್ದ ‘ದೀಕ್ಷಾರಂಭ-2026’ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾ.ಸಿ.ಜಿ.ಬೆಟಸೂರ ಮಠ, ಪ್ರೊ.ಕೆ.ಎಸ್.ಸುರೇಶ್, ಎಚ್.ಎನ್.ವೆಂಕಟೇಶ್, ವಕೀಲ ಶಿವಪ್ರಸಾದ್ ಶಾಂತನಗೌಡರ್, ವಾಣಿ ಇದ್ದರು.
ಕುವೆಂಪುನಗರದ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಆಯೋಜಿಸಿದ್ದ ‘ದೀಕ್ಷಾರಂಭ-2026’ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾ.ಸಿ.ಜಿ.ಬೆಟಸೂರ ಮಠ, ಪ್ರೊ.ಕೆ.ಎಸ್.ಸುರೇಶ್, ಎಚ್.ಎನ್.ವೆಂಕಟೇಶ್, ವಕೀಲ ಶಿವಪ್ರಸಾದ್ ಶಾಂತನಗೌಡರ್, ವಾಣಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಮೃದ್ಧ ಗ್ರಂಥಾಲಯದ ಸೌಲಭ್ಯವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು
  • ದೀಕ್ಷಾರಂಭ ಎಂದರೆ ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಪಯಣವಾಗಿದೆ

ಮೈಸೂರು:

ಶಿಕ್ಷಣ ಸಂಸ್ಥೆಗಳ ಪ್ರಗತಿಗೆ ವಿದ್ಯಾರ್ಥಿಗಳು ಹಾಗೂ ಪಾಲಕರ ಸಹಕಾರ ಅತ್ಯವಶ್ಯಕ ಎಂದು ಜೆಎಸ್‌ಎಸ್ ಕಾನೂನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೊ.ಕೆ.ಎಸ್.ಸುರೇಶ್ ಹೇಳಿದರು.

ಕುವೆಂಪುನಗರದ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಆಯೋಜಿಸಿದ್ದ ‘ದೀಕ್ಷಾರಂಭ-2026’ ನೂತನ ವಿದ್ಯಾರ್ಥಿಗಳ ಕಾರ್ಯಾಗಾರದಲ್ಲಿ ಮಾತನಾಡಿರು.
ಪಾಲಕರು ತಿಂಗಳಿಗೊಮ್ಮೆ ಕಾಲೇಜಿಗೆ ಭೇಟಿ ನೀಡಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಬೇಕು. ಜೆಎಸ್‌ಎಸ್ ಕಾನೂನು ಕಾಲೇಜಿನ ಅನುಭವಿ ಉಪನ್ಯಾಸಕರು ಹಾಗೂ ಸಮೃದ್ಧ ಗ್ರಂಥಾಲಯದ ಸೌಲಭ್ಯವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಕಾನೂನು ಕಾಲೇಜುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಮೂಲ ಸೌಕರ್ಯಗಳಿಗೂ ಆದ್ಯತೆ ನೀಡಬೇಕಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಹಿರಿಯ ವಕೀಲ ‘ಲಾಗೈಡ್’ ಎಚ್. ಎನ್. ವೆಂಕಟೇಶ್ ಮಾತನಾಡಿ, ದೀಕ್ಷಾರಂಭ ಎಂದರೆ ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಪಯಣವಾಗಿದೆ. ಜೆಎಸ್‌ಎಸ್ ಕಾನೂನು ಕಾಲೇಜು ತನ್ನದೇ ಆದ ಶೈಕ್ಷಣಿಕ ಪರಂಪರೆ ಮತ್ತು ಮಾನ್ಯತೆ ಹೊಂದಿರುವ ಪ್ರತಿಷ್ಠಿತ ಸಂಸ್ಥೆಯಾಗಿದ್ದು, ವಿದ್ಯಾರ್ಥಿಗಳು ಜ್ಞಾನಾರ್ಜನೆ ಮೂಲಕ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಹೇಳಿದರು.
ದಿವಂಗತ ಪ್ರೊ.ಅಜ್ಜಪ್ಪ ಅವರ ಸ್ಮರಣಾರ್ಥ ‘ಲಾಗೈಡ್’ವತಿಯಿಂದ ಒಂದು ಲಕ್ಷ ರೂ. ದತ್ತಿ ನಿಧಿ ಸ್ಥಾಪಿಸಿ, ಅಂತಿಮ ವರ್ಷದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾನೂನು ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಹೈಕೋರ್ಟ್ ಹಿರಿಯ ವಕೀಲ ಶಿವಪ್ರಸಾದ್ ಶಾಂತನಗೌಡರ್ ಮಾತನಾಡಿ, ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಈ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಉನ್ನತ ನ್ಯಾಯಾಲಯಗಳಲ್ಲಿ ಯಶಸ್ವಿಯಾಗಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಜೆಎಸ್‌ಎಸ್ ವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರ ಮಠ ಮಾತನಾಡಿ, ಜೆಎಸ್‌ಎಸ್ ಮಹಾ ವಿದ್ಯಾಪೀಠವು ದೇಶ ವಿದೇಶಗಳಲ್ಲಿ 382ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ವಿದ್ಯಾರ್ಥಿಗಳು, ಪಾಲಕರ ವಿಶ್ವಾಸಗಳಿಸಿದೆ ಎಂದರು.
ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಅನೇಕಕರು ಉನ್ನತ ಹುದ್ದೆಗೇರಿದ್ದಾರೆ. ಮುಂದಿನ ದಿನಗಳಲ್ಲಿ ಈ ಕಾನೂನು ಕಾಲೇಜಿಗೆ ಇನ್ನಷ್ಟು ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲೆ ವಾಣಿ, ಅಧ್ಯಾಪಕರಾದ ಪ್ರೊ.ಜಗದೀಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net