ಚಾಮುಂಡಿ ವಿಹಾರ ಕ್ರೀಡಾಂಗಣದ ಕ್ರೀಡಾ ವಸತಿನಿಲಯಕ್ಕೆ ಸೋಮವಾರ ಭೇಟಿ ನೀಡಿದ ಎಂ.ಎನ್.ಅನುಚೇತ್ ವಿದ್ಯಾರ್ಥಿನಿಯರೊಂದಿಗೆ ಊಟ ಮಾಡಿ ಆಹಾರದ ಗುಣಮಟ್ಟ ಪರಿಶೀಲಿಸಿದರು. ಭಾಸ್ಕರ್ ನಾಯಕ್, ಎಸ್.ಎಚ್.ನಿರ್ಮಲಾ ಇದ್ದರು.
ಕ್ರೀಡಾ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರು ಕ್ರೀಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಯುವ ಜನರಿಗೆ ಮಾದರಿಯಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಂ.ಎನ್. ಅನುಚೇತ್ ಹೇಳಿದರು.
ಚಾಮುಂಡಿ ವಿಹಾರ ಕ್ರೀಡಾಂಗಣದ ಕ್ರೀಡಾ ವಸತಿನಿಲಯಕ್ಕೆ ಸೋಮವಾರ ಭೇಟಿ ನೀಡಿದ ಅವರು, ವಿದ್ಯಾರ್ಥಿನಿಯರೊಂದಿಗೆ ವಸತಿನಿಲಯಗಳಲ್ಲಿ ದೊರಕುತ್ತಿರುವ ಆಹಾರ, ತರಬೇತಿ ಹಾಗೂ ಇನ್ನಿತರೆ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿನಿಯರೊಂದಿಗೆ ಊಟ ಮಾಡಿ ಆಹಾರದ ಗುಣಮಟ್ಟ ಪರಿಶೀಲಿಸಿದರು.
ವಸತಿ ನಿಲಯದಲ್ಲಿ ಸರ್ಕಾರ ನಿಗದಿಪಡಿಸಿರುವ ರೀತಿ ಪ್ರತಿದಿನ ಉಪಹಾರ ಹಾಗೂ ಊಟದ ವ್ಯವಸ್ಥೆ ಇರಬೇಕು, ಕ್ರೀಡೆಯಲ್ಲಿ ಭಾಗವಹಿಸಲು ಊಟ ಹಾಗೂ ತರಬೇತಿ ಎರಡು ಮುಖ್ಯ ಅಂಶವಾಗಿರುತ್ತದೆ. ಯಾವುದೇ ರೀತಿಯ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇದ್ದರು.