ಬಾಲಕಿಯರ ಹಾಗೂ ಬಾಲಕರ ವಾಲಿಬಾಲ್ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿವೆ. ಅಥ್ಲೆಟಿಕ್ಸ್‌ನಲ್ಲಿಯೂ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಲೋಕೇಶ್ ಆರಾಧ್ಯ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ಸಂಜನಾ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕೆಂಡಗಣ್ಣೇಶ್ವರಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಯಶಸ್ವಿನಿ 3000 ಮೀಟರ್ ಓಟದಲ್ಲಿ ತೃತೀಯ, 400 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಮೃತ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಸಂಜನಾ 400 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.