ಚೆನ್ನಾಗಿ ಓದಿ ಆರ್ಥಿಕವಾಗಿ ಸ್ವಾವಲಂಬಿಗಳಾಗಿ: ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಸಲಹೆ

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಶ್ರೀ ಸಿದ್ದರಾಮಯ್ಯ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಂ. ರಾಮಯ್ಯ, ಕೃಪಾಕರ, ಶಿವಣ್ಣಗೌಡ,  ಪುಟ್ಟಬಸವೇಗೌಡ, ಡಾ.ರೇಣುಕಾ ಕುಮಾರ, ಸ್ವಾಮಿ, ಡಾ ಲೀಲಾವತಿ, ಎಂ. ಮಂಜುನಾಥ ಇತರರು ಇದ್ದರು.
ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಶ್ರೀ ಸಿದ್ದರಾಮಯ್ಯ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಂ. ರಾಮಯ್ಯ, ಕೃಪಾಕರ, ಶಿವಣ್ಣಗೌಡ, ಪುಟ್ಟಬಸವೇಗೌಡ, ಡಾ.ರೇಣುಕಾ ಕುಮಾರ, ಸ್ವಾಮಿ, ಡಾ ಲೀಲಾವತಿ, ಎಂ. ಮಂಜುನಾಥ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯು ತಮ್ಮದೇ ಆದ ಹೆಸರನ್ನು ಮಾಡಿದ್ದಾರೆ
  • ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಉನ್ನತ ಹುದ್ದೆಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ
ಮೈಸೂರು: ವಿದ್ಯಾರ್ಥಿಗಳು ಚೆನ್ನಾಗಿ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಸರ್ಕಾರದ ವಿವಿಧ ಹುದ್ದೆಗಳನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ತಿಳಿಸಿದರು.
ವಿಜಯನಗರ ಒಂದನೇ ಹಂತದಲ್ಲಿರುವ ಶ್ರೀ ಸಿದ್ದರಾಮಯ್ಯ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಶುಭಾಶಯ ಕೋರಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿನಿಯರಿಗೆ ಉಚಿತ ಹಾಸ್ಟೆಲ್‌ಗಳು, ವಿದ್ಯಾರ್ಥಿವೇತನ, ಉಚಿತ ಶಿಕ್ಷಣ, ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿಯೋಜನೆ ನೀಡಿದೆ ಎಂದರು.
ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯು ತಮ್ಮದೇ ಆದ ಹೆಸರನ್ನು ಮಾಡಿದ್ದಾರೆ. ಉಕ್ಕಿನ ಮಹಿಳೆ ಮಾಜಿ ಪ್ರಧಾನಿಯಾದ ಇಂದಿರಾ ಗಾಂಧಿಯಿಂದ ಹಿಡಿದು ಇಂದಿನ ರಾಷ್ಟ್ರಪತಿ ದ್ರೌಪತಿ ಮುರ್ಮುವರೆಗೂ ರಾಜಕೀಯವಾಗಿಯೂ ಮುಂದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಉನ್ನತ ಹುದ್ದೆಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ ಎಂದು ಹೇಳಿದರು.
ಹೆಣ್ಣು ತ್ಯಾಗಮಯಿಯಾಗಿ ನಿಸ್ವಾರ್ಥ ಜೀವನ ನಡೆಸುತ್ತಿದ್ದಾಳೆ. ಆ ತ್ಯಾಗಮಯಿ ಹೆಣ್ಣಿನ ಜೀವ ಸಂಕುಲಕ್ಕೆ ಅನಂತಕೋಟಿ ನಮನಗಳನ್ನು ಸಲ್ಲಿಸುತ್ತೇನೆ ಎಲ್ಲರಿಗೂ ಶುಭವಾಗಲಿ ಎಂದರು.
ವನ್ಯಜೀವಿ ಛಾಯಾಗ್ರಾಹಕ ಕೃಪಾಕರ, ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಶಿವಣ್ಣಗೌಡ, ಕಾಳಿದಾಸ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಪುಟ್ಟಬಸವೇಗೌಡ, ಮುಖಂಡರಾದ ಡಾ.ರೇಣುಕಾ ಕುಮಾರ, ಸ್ವಾಮಿ, ಡಾ.ಲೀಲಾವತಿ, ಎಂ. ಮಂಜುನಾಥ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net