ಡಿ.15ರೊಳಗೆ ಯೋಜನಾ ವರದಿ ಸಲ್ಲಿಸಿ

ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನು ರಾಜ್ಯ ನೀತಿ ಮತ್ತು ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಉದ್ಘಾಟಿಸಿದರು. ಯುಕೇಶ್‌ಕುಮಾರ್, ಕೆ.ಆರ್.ನಂದಿನಿ, ಎಸ್.ಬಸವರಾಜು, ರಮಣ್‌ದೀಪ್ ಚೌಧರಿ ಇತರರಿದ್ದರು.
ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನು ರಾಜ್ಯ ನೀತಿ ಮತ್ತು ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಉದ್ಘಾಟಿಸಿದರು. ಯುಕೇಶ್‌ಕುಮಾರ್, ಕೆ.ಆರ್.ನಂದಿನಿ, ಎಸ್.ಬಸವರಾಜು, ರಮಣ್‌ದೀಪ್ ಚೌಧರಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ನೀತಿ, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಸೂಚನೆ
  • ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮೈಸೂರು ವಿಭಾಗದ 8 ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ
  • ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಗಳೂರು ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ
ಮೈಸೂರು: ಜಿಲ್ಲಾ ಯೋಜನಾ ವರದಿಗಳನ್ನು ಆಯವ್ಯಯ ಸಿದ್ಧಪಡಿಸುವ ಮೊದಲು ಸಮಿತಿಗೆ ಸಲ್ಲಿಸಬೇಕು. ಮೈಸೂರು ವಿಭಾಗದ ಎಲ್ಲ ಜಿಲ್ಲೆಗಳು ವರದಿಯನ್ನು ಡಿ.15 ರೊಳಗೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮೈಸೂರು ವಿಭಾಗದ 8 ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಕೇಂದ್ರೀಕರಣ ವ್ಯವಸ್ಥೆಯನ್ನು ಸೈದ್ಧಾಂತಿಕವಾಗಿ ನಾವು ಒಪ್ಪಿಕೊಂಡಿದ್ದರೂ ಜಿಲ್ಲಾ ಯೋಜನಾ ವರದಿ ತಯಾರಿಕೆ ಸಮಿತಿ ಸಭೆಗಳು ನಿಗದಿತವಾಗಿ ನಡೆಯಬೇಕು. ವರದಿಯಲ್ಲಿ ಸುಸ್ಥಿರ ಅಭಿವೃದ್ಧಿ, ಜಿಡಿಪಿ, ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಯೋಜನೆ ತಯಾರಿಸುವಾಗ ಕೂಲಂಕಷವಾಗಿ ಪರಿಶೀಲಿಸಿ, ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ ಯಾವುದೇ ಯೋಜನೆಗಳು ಒವರ್‌ಲ್ಯಾಪ್ ಆಗದಂತೆ ನೋಡಿಕೊಳ್ಳಿ ಎಂದರು.
ಮಾನವ ಅಭಿವೃದ್ಧಿ ಸೂಚ್ಯಂಕ ಹೆಚ್ಚಳ ಮಾಡಲು ಹಾಗೂ ಲಭ್ಯವಿರುವ ಅನುದಾನದ ಆಧಾರದ ಮೇಲೆ, ಯೋಜನೆ ರೂಪಿಸಿ ಅನುಷ್ಠಾನದ ನಂತರ ಉಂಟಾಗುವ ಉತ್ತಮ ಬೆಳವಣಿಗೆ ಬಗ್ಗೆ ಅರ್ಥ ಮಾಡಿಕೊಂಡು ಯೋಜನೆ ರೂಪಿಸಬೇಕು ಎಂದರು.
ಮೈಸೂರು ಜಿಪಂ ಸಿಇಒ ಯುಕೇಶ್‌ಕುಮಾರ್ ಮಾತನಾಡಿ, ಜಿಲ್ಲೆಯ 9 ತಾಲೂಕುಗಳಲ್ಲಿ ಆಯಾ ತಾಲೂಕು ಶಾಸಕರ ಅಧ್ಯಕ್ಷತೆಯಲ್ಲಿ
ತಾಲೂಕು ಮಟ್ಟದ ಯೋಜನಾ ಸಮಿತಿ ಸಭೆಯನ್ನು ನ.4 ರಿಂದ 15 ರವರೆಗೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ವರದಿ ನೀಡಲಾಗುವುದು ಎಂದರು.
ಮಂಡ್ಯ ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಸುಸ್ಥಿರ ಅಭಿವೃದ್ಧಿಯಲ್ಲಿ ಮುಖ್ಯವಾಗಿ ಶಿಕ್ಷಣ, ಕೃಷಿ, ಪೌಷ್ಟಿಕ ಆಹಾರ ಸೇರಿದಂತೆ ಹಲವು ವಿಷಯವನ್ನು ಮುಖ್ಯವಾಗಿ ಇಟ್ಟಿಕೊಂಡು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದರು.
ಮಾನವ ಯೋಜನೆ ಸಂಯೋಜನೆಯ ಹಿರಿಯ ನಿರ್ದೇಶಕ ಎಸ್.ಬಸವರಾಜು ಮಾತನಾಡಿ, ಮಾನವ ಅಭಿವೃದ್ಧಿ, ಸುಸ್ಥಿರ ಅಭಿವೃದ್ಧಿಯನ್ನು ಹೇಗೆ ಸಾಧಿಸಬೇಕು, ಯಾವ ಯಾವ ಜಿಲ್ಲೆಗಳು ಹೆಚ್ಚು ಪ್ರಗತಿ ಸಾಧಿಸಿದೆ. ಯಾವ ಕ್ಷೇತ್ರ ಹಿಂದೆ ಹಿಂದುಳಿದಿದೆ. ಹೇಗೆ ಅಭಿವೃದ್ಧಿ ಸಾಧಿಸಬೇಕು. ಯೋಜನೆಗಳನ್ನು ಯಾವ ರೀತಿಯಲ್ಲಿ ಅಳವಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂಬುದರ ಬಗ್ಗೆ ವಿಷಯ ಮಂಡಿಸಿದರು.
ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ರಮಣ್ ದೀಪ್ ಚೌಧರಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಗಳೂರು ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net