ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ, ಸಂಸ್ಥೆಗೆ ಶೇ.100 ಫಲಿತಾಂಶ ಕೊಟ್ಟ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವೈದ್ಯಾಧಿಕಾರಿ ಡಾ.ಪೂಜಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಡಿ ಮಂಜುನಾಥ್, ಇಶಾ ಫೌಂಡೇಶನ್ ಸ್ವಯಂ ಸೇವಕಿ ಸುಜಾತಾ, ಸಂಸ್ಥೆಯ ಕಾರ್ಯದರ್ಶಿ ಎ.ವಿ. ಛಾಯಾ, ಪ್ರಾಂಶುಪಾಲ ರಾಜು, ಮುಖ್ಯಶಿಕ್ಷಕರಾದ ಎಸ್.ಆರ್ ವೆಂಕಟೇಶ್, ಕುಮಾರ್, ಉಪನ್ಯಾಸಕರು, ಶಿಕ್ಷಕರು ಇದ್ದರು.