ನಿರ್ದಿಷ್ಟ ಗುರಿ, ದೃಢ ಸಂಕಲ್ಪವಿದ್ದರೆ ಯಶಸ್ಸು ಸಾಧ್ಯ

ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಪುರಸ್ಕರಿಸಲಾಯಿತು. ಟಿ.ರಮ್ಯಾ, ಪ್ರೊ.ಮೊರಬದ ಮಲ್ಲಿಕಾರ್ಜುನ, ಟಿ.ಗುರುಪಾದಸ್ವಾಮಿ, ಡಾ.ರೇಚಣ್ಣ, ಎಸ್.ಮಂಜುಳಾ ಇದ್ದರು.
ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಪುರಸ್ಕರಿಸಲಾಯಿತು. ಟಿ.ರಮ್ಯಾ, ಪ್ರೊ.ಮೊರಬದ ಮಲ್ಲಿಕಾರ್ಜುನ, ಟಿ.ಗುರುಪಾದಸ್ವಾಮಿ, ಡಾ.ರೇಚಣ್ಣ, ಎಸ್.ಮಂಜುಳಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತೆ ಟಿ.ರಮ್ಯಾ ಅಭಿಪ್ರಾಯ
ನಿರ್ದಿಷ್ಟ ಗುರಿ ಮತ್ತು ದೃಢ ಸಂಕಲ್ಪವಿದ್ದರೆ ಮಾತ್ರ ಯಶಸ್ಸು ಸಾಧ್ಯ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತೆ ಟಿ.ರಮ್ಯಾ ಸಲಹೆ ನೀಡಿದರು.
ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಕಾಲಹರಣ ಮಾಡದೆ ಅದನ್ನು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಮಾಹಿತಿಗಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಜತೆಗೆ ತಮ್ಮ ಸಾಧನೆಯ ಅನುಭವಗಳನ್ನು ಹಂಚಿಕೊಂಡರು.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಬದುಕು ಸುಂದರವಾಗುವಲ್ಲಿ ಶೈಕ್ಷಣಿಕ ಹಂತದಲ್ಲಿ ನಾವು ಪಡೆಯುವ ಅತ್ಯುನ್ನತ ಸ್ಥಾನವೂ ಮುಖ್ಯ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆಯುವುದು ಸಾಮಾನ್ಯ. ಆದರೆ ಇಂದು ಮಾನವಿಕ ಜಗತ್ತನ್ನು ನಿರ್ಮಿಸುವ ಕಲಾ ವಿಭಾಗದಲ್ಲಿ ಬಹಳ ಸಂಖ್ಯೆಯಲ್ಲಿ ಅತ್ಯುನ್ನತ ಸ್ಥಾನ ಪಡೆದಿರುವುದು ವಿಶೇಷವಾಗಿದೆ ಎಂದರು.
ಯಶಸ್ಸು ಗಳಿಸಲು ನಮಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸ್ಫೂರ್ತಿ, ಪ್ರೇರಣೆ ನೀಡಿದವರನ್ನು ನೆನೆದುಕೊಳ್ಳುವುದು ಬಹಳ ಮುಖ್ಯ. ಆಮೆ ಮತ್ತು ಮೊಲದ ಕಥೆ ಹೇಳುವ ಮೂಲಕ ನಮ್ಮ ಗುರಿ ಸಾಧನೆಯಾಗುವವರೆಗೂ ಮೈಮರೆಯಬಾರದು ಎಂಬುದನ್ನು ಅರ್ಥೈಸಿದರು. ಪರಮಪೂಜ್ಯರ ದೂರ ದೃಷ್ಟಿಯಂತೆ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು ಬೌದ್ಧಿಕ ಸಾಮರ್ಥ್ಯ ಹೊಂದಿ ಸಮಾಜಮುಖಿಯಾಗುವ ಮೂಲಕ ಸಾರ್ಥಕ ಜೀವನ ನಡೆಸುವಂತೆ ಕಿವಿಮಾತು ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ 8ನೇ ರ‌್ಯಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದ ಬಿ.ಎಸ್.ಮಾನ್ಯಶ್ರಿ ಅವರನ್ನು ಸನ್ಮಾನಿಸಲಾಯಿತು. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿ ಪಡೆದ 107 ವಿದ್ಯಾರ್ಥಿನಿಯರಿಗೆ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.
ಪ್ರಾಂಶುಪಾಲ ಟಿ.ಗುರುಪಾದಸ್ವಾಮಿ, ಪದವಿ ಕಾಲೇಜಿನ ಪ್ರಾಚಾರ್ಯ ಡಾ.ರೇಚಣ್ಣ, ಪ್ರತಿಭಾ ಪುರಸ್ಕಾರ ಸಮಿತಿ ಸಂಚಾಲಕಿ ಎಸ್.ಮಂಜುಳಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net