ಗ್ರಾಮಗಳ ಅಭಿವೃದ್ಧಿಗೆ ಸಹಕಾರ ನೀಡುವೆ

ಪಿರಿಯಾಪಟ್ಟಣ  ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ವೆಂಕಟೇಶ್ ಚಾಲನೆ ನೀಡಿದರು.  ತಹಸೀಲ್ದಾರ್ ನಿಸರ್ಗ ಪ್ರಿಯ, ತಾಪಂ ಇಒ ಸುನಿಲ್ ಕುಮಾರ್,  ಬಿಇಒ ರವಿ ಪ್ರಸನ್ನ, ಪಿಡಿಒ ಮನು ಇತರರು ಹಾಜರಿದ್ದರು.
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ವೆಂಕಟೇಶ್ ಚಾಲನೆ ನೀಡಿದರು. ತಹಸೀಲ್ದಾರ್ ನಿಸರ್ಗ ಪ್ರಿಯ, ತಾಪಂ ಇಒ ಸುನಿಲ್ ಕುಮಾರ್, ಬಿಇಒ ರವಿ ಪ್ರಸನ್ನ, ಪಿಡಿಒ ಮನು ಇತರರು ಹಾಜರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ವೆಂಕಟೇಶ್ ಭರವಸೆ
  • ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ
ಕಿತ್ತೂರು: ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಸಹಕಾರ ನೀಡುವೆ ಎಂದು ಶಾಸಕ ಕೆ.ವೆಂಕಟೇಶ್ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನ ಪ್ರತಿ ಗ್ರಾಮದಲ್ಲಿನ ಸಮಸ್ಯೆಗಳನ್ನು ನನ್ನ ಗಮನಕ್ಕೆ ತರಬೇಕು. ಅದನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ಹಿಂದೆ ಸುವರ್ಣ ಗ್ರಾಮ ಯೋಜನೆಯಡಿ ಈ ಗ್ರಾಮವನ್ನು ದತ್ತು ತೆಗೆದುಕೊಂಡು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಗ್ರಾಮಕ್ಕೆ ಅವಶ್ಯವಿರುವ ಎಲ್ಲ ಕೆಲಸಗಳನ್ನೂ ಹಂತ ಹಂತವಾಗಿ ಮಾಡುತ್ತೇನೆ. ಯಾವುದೇ ಪಕ್ಷ ಭೇದವಿಲ್ಲದೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆ. ತಾಲೂಕಿನ ಯಾವುದೇ ಗ್ರಾಮಗಳು ಮೂಲ ಸೌಕರ್ಯದಿಂದ ವಂಚಿತರಾಗಬಾರದು ಎಂಬ ಧ್ಯೇಯದಿಂದ ಹೆಚ್ಚು ಅನುದಾನವನ್ನು ತರುತ್ತೇನೆ. ಗುಣಮಟ್ಟದ ಕಾಮಗಾರಿಗಳನ್ನು ಪೂರ್ಣಗೊಳಿಸುವ ಉದ್ದೇಶ ನನ್ನದು ಎಂದರು.
ತಹಸೀಲ್ದಾರ್ ನಿಸರ್ಗಪ್ರಿಯ, ತಾಪಂ ಇಒ ಸುನಿಲ್ ಕುಮಾರ್, ಬಿಇಒ ರವಿ ಪ್ರಸನ್ನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ. ಸ್ವಾಮಿ, ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮ್ ಜಾನ್ ಬಾಬು , ತಾಲೂಕು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಜಿಪಂ ಮಾಜಿ ಸದಸ್ಯ ಮಂಜುನಾಥ್, ಪಿಡಿಒ ಮನು, ವೆಂಕಟೇಶ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net