ನಿರುದ್ಯೋಗಿಗಳಿಗೆ ‘ಸ್ವಾವಲಂಬಿ ಸಾರಥಿ’ ಅನುಕೂಲ

2025-26ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆಯಡಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಮಂಜೂರಾದ ವಾಹನದ ಕೀ ಅನ್ನು ಫಲಾನುಭವಿ ಕೀರ್ತನಾರಿಗೆಗೆ ಶಾಸಕ ಎಚ್.ಕೆ.ಸುರೇಶ್ ಹಸ್ತಾಂತರಿಸಿದರು. ಪರ್ವತಯ್ಯ, ಪ್ರಕಾಶ್ ಇತರರು ಇದ್ದರು.
2025-26ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆಯಡಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಮಂಜೂರಾದ ವಾಹನದ ಕೀ ಅನ್ನು ಫಲಾನುಭವಿ ಕೀರ್ತನಾರಿಗೆಗೆ ಶಾಸಕ ಎಚ್.ಕೆ.ಸುರೇಶ್ ಹಸ್ತಾಂತರಿಸಿದರು. ಪರ್ವತಯ್ಯ, ಪ್ರಕಾಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Swavalambi Sarathi
ಬೇಲೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನದ ಫಲಾನುಭವಿಗೆ ಶಾಸಕ ಎಚ್.ಕೆ.ಸುರೇಶ್ ಸೋಮವಾರ ತಮ್ಮ ನಿವಾಸದ ಆವರಣ ವಾಹನದ ಕೀ ಹಸ್ತಾಂತರಿಸಿ ಉತ್ತಮ ಜೀವನ ನಡೆಸಲು ಮುಂದಾಗಿ ಎಂದು ಶುಭ ಕೋರಿದರು.
ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕರು ಹಾಗೂ ವಿದ್ಯಾರ್ಥಿಗಳು ಉದ್ಯೋಗದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ ಸ್ವಾವಲಂಬಿ ಸಾರಥಿ ಯೋಜನೆ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಾಹನಗಳನ್ನು ವಿತರಿಸುತ್ತಿದೆ. ಜತೆಗೆ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ಸಮಾಜದ ಹಿಂದುಳಿದ ವರ್ಗದವರು ಆರ್ಥಿಕವಾಗಿ ಸಬಲರಾಗಬೇಕು ಎಂಬ ಉದ್ದೇಶದಿಂದ ಸಂವಿಧಾನದಲ್ಲಿ ಕಾನೂನು ರೂಪಿಸಿದ್ದಾರೆ. ಅದಕ್ಕೆ ಪೂರಕವಾಗಿ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸ್ವಂತ ಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳಲು 2025-26ನೇ ಸಾಲಿನಲ್ಲಿ ಕ್ಷೇತ್ರದಲ್ಲಿ ಎಂಟು ಜನ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಲಾಗುತ್ತಿದೆ. ಮತ್ತು ಪ್ರತಿಯೊಂದು ವಾಹನಕ್ಕೂ ನಿಗಮದಿಂದ ನಾಲ್ಕು ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ. ಅಲ್ಲದೆ ವಿಶೇಷವಾಗಿ ಕೀರ್ತನಾ ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂಬ ಉದ್ದೇಶದಿಂದ ಅವರಿಗೆ ಸರ್ಕಾರದಿಂದ ಮಂಜೂರಾದ ವಾಹನದ ಕೀ ಹಸ್ತಾಂತರಿಸುತ್ತಿದ್ದು, ಇವರ ಮೂಲಕ ಇತರೆ ಮಹಿಳೆಯರಿಗೂ ಸ್ಪೂರ್ತಿಯಾಗಲಿ ಎಂದರು.
ಮುಖಂಡ ಪರ್ವತಯ್ಯ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಸಿ.ಎಸ್.ಪ್ರಕಾಶ್, ಮಂಜುನಾಥ್, ರಂಗನಾಥ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net