ಗುಣಮಟ್ಟದ ಹಾಲು ಸರಬರಾಜಿಗೆ ಕ್ರಮವಹಿಸಿ

ಪಿರಿಯಾಪಟ್ಟಣ ತಾಲೂಕಿನ ಮುದ್ದನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ವಾರ್ಷಿಕ ಸಭೆಯಲ್ಲಿ ಹೆಚ್ಚು ಹಾಲು ಸರಬರಾಜು ಮಾಡಿದ ಸದಸ್ಯರನ್ನು ಅಭಿನಂದಿಸಲಾಯಿತು. ಡಾ.ಸತೀಶ್, ನಂದಿನಿ, ವೀರಭದ್ರಸ್ವಾಮಿ, ಮಾದೇಗೌಡ ಇತರರು ಇದ್ದರು.
ಪಿರಿಯಾಪಟ್ಟಣ ತಾಲೂಕಿನ ಮುದ್ದನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ವಾರ್ಷಿಕ ಸಭೆಯಲ್ಲಿ ಹೆಚ್ಚು ಹಾಲು ಸರಬರಾಜು ಮಾಡಿದ ಸದಸ್ಯರನ್ನು ಅಭಿನಂದಿಸಲಾಯಿತು. ಡಾ.ಸತೀಶ್, ನಂದಿನಿ, ವೀರಭದ್ರಸ್ವಾಮಿ, ಮಾದೇಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • quality milk supply

ಪಿರಿಯಾಪಟ್ಟಣ:

ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರು ಗುಣಮಟ್ಟದ ಹಾಲು ಸರಬರಾಜು ಮಾಡಲು ಕ್ರಮ ವಹಿಸುವಂತೆ ಮೈಮುಲ್ ಸಹಾಯಕ ವ್ಯವಸ್ಥಾಪಕ ಡಾ.ಸತೀಶ್ ತಿಳಿಸಿದರು.

ತಾಲೂಕಿನ ಮುದ್ದನಹಳ್ಳಿ ಗ್ರಾಮದಲ್ಲಿ ಸೋಮವಾರ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಮೈಸೂರು ಹಾಲು ಒಕ್ಕೂಟದ ವತಿಯಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಸಹಕಾರ ನೀಡಲಾಗುತ್ತಿದೆ. ಒಕ್ಕೂಟಕ್ಕೆ ಪ್ರತಿನಿತ್ಯ 12 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದ್ದು, 3 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಉಳಿದ ಹಾಲಿನಿಂದ ವಿವಿಧ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಹೈನುಗಾರಿಕೆಯನ್ನು ಉತ್ತೇಜಿಸಲು ಮೈಮುಲ್ ವತಿಯಿಂದ ಹಾಲು ಉತ್ಪಾದಕರಿಗೆ ಪರಿಕರಗಳನ್ನು ನೀಡಲಾಗುತ್ತಿದೆ. ಜಾನುವಾರುಗಳಿಗೆ ವಿಮೆಯನ್ನೂ ಮಾಡಿಸುತ್ತಿದ್ದೇವೆ. ರಾಸು ಮೃತಪಟ್ಟರೆ 20 ಸಾವಿರ ರೂ. ವರೆಗೂ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಮೈಮುಲ್ ವಿಸ್ತರಣಾಧಿಕಾರಿ ನಂದಿನಿ ಮಾತನಾಡಿದರು. ಸಂಘಕ್ಕೆ ಹೆಚ್ಚು ಹಾಲು ಸರಬರಾಜು ಮಾಡಿದ ಜಗದೀಶ್, ಯೋಗೇಶ್ ಮತ್ತಿತರರನ್ನು ಅಭಿನಂಧಿಸಲಾಯಿತು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಯಶಸ್ವಿನಿ, ಸಮೃದ್ಧ, ಪ್ರಿಯಾಂಕಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂಘದ ಅಧ್ಯಕ್ಷ ವೀರಭದ್ರಸ್ವಾಮಿ, ಉಪಾಧ್ಯಕ್ಷ ಮಾದೇಗೌಡ, ನಿರ್ದೇಶಕರಾದ ಬೋರೇಗೌಡ, ಹರೀಶ್, ಮರಿಯಪ್ಪ, ಪಲ್ಲವಿ, ಉಷಾರಾಣಿ, ಸ್ವಾಮಿ, ಶಶಿಕುಮಾರ್, ಉಮೇಶ್, ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಎಂ.ಕೆ.ಶೇಖರ್ ಇತರರು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net