ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ

ಬೆಟ್ಟದಪುರ ಸಮೀಪದ ಐಚನಹಳ್ಳಿ ಗ್ರಾಮದಲ್ಲಿ ಕೆರೆ, ಕಾಲುವೆ ಮತ್ತು ಸೇವಾ ರಸ್ತೆ ನಿರ್ಮಾಣ ಕಾಮಗಾರಿಗೆ ಪಶು ಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು.
ಬೆಟ್ಟದಪುರ ಸಮೀಪದ ಐಚನಹಳ್ಳಿ ಗ್ರಾಮದಲ್ಲಿ ಕೆರೆ, ಕಾಲುವೆ ಮತ್ತು ಸೇವಾ ರಸ್ತೆ ನಿರ್ಮಾಣ ಕಾಮಗಾರಿಗೆ ಪಶು ಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಸಚಿವ ಕೆ.ವೆಂಕಟೇಶ್ ಸೂಚನೆ
ಬೆಟ್ಟದಪುರ: ಗ್ರಾಮೀಣ ಭಾಗದ ರೈತರ ಕೃಷಿ ಚಟುವಟಿಗಳಿಗೆ ನೀರಿನ ಸರಬರಾಜು ಸೇರಿದಂತೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಪಶು ಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಸೂಚನೆ ನೀಡಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಐಚನಹಳ್ಳಿ ಗ್ರಾಮದಲ್ಲಿ ಶನಿವಾರ ಕೆರೆ, ಕಾಲುವೆ ಮತ್ತು ಸೇವಾ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು.
ವಿವಿಧ ಕಾಮಗಾರಿಗಳ ಅಭಿವೃದ್ಧಿ ಸಂಬಂಧಪಟ್ಟಂತೆ ಗ್ರಾಮೀಣ ಪ್ರವಾಸ ಕೈಗೊಂಡಾಗ ಸ್ಥಳೀಯ ರೈತರು ಹಾಗೂ ಸಾರ್ವಜನಿಕರು ಸಾಕಷ್ಟು ಸಮಸ್ಯೆಗಳನ್ನು ಗಮನಕ್ಕೆ ತರುತ್ತಿರುತ್ತಾರೆ. ಈ ಬಗ್ಗೆ ಅಧಿಕಾರಿಗಳು ಕೂಡಲೇ ಕ್ರಮವಹಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ತಾಲೂಕಿನ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಅನುದಾನ ತಂದು ಕೆಲಸ ಮಾಡಲು ಹೆಚ್ಚು ಒತ್ತು ನೀಡಿದ್ದೇನೆ. ಇನ್ನು ಉಳಿದ ಅನೇಕ ಅಭಿವೃದ್ಧಿ ಕೆಲಸಗಳನ್ನು ಹಂತ ಹಂತವಾಗಿ ಮಾಡುವ ಮೂಲಕ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಸಭೆಯಲ್ಲಿ ಸ್ಥಳೀಯ ಮುಖಂಡರು ಗ್ರಾಮದಲ್ಲಿ ಉಂಟಾಗಿರುವ ಜೆಜೆಎಂ ಕಾಮಗಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಈ ವೇಳೆ ಸಚಿವರು ಪ್ರತಿಕ್ರಿಯಿಸಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತುರ್ತು ಕಾರ್ಯ ಕೈಗೊಳ್ಳಬೇಕು ಎಂದರು.
ಸಮೀಪದ ಮನುಗನಹಳ್ಳಿ, ಹೊನ್ನಾಪುರ ಮತ್ತು ಸೂಳೆಕೋಟೆ ಗ್ರಾಮಗಳಲ್ಲಿ ರಸ್ತೆ ಡಾಂಬರೀಕರಣ ಹಾಗೂ ಕೆರೆ ಕಾಲುವೆ ಮತ್ತು ಸೇವಾ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಆಶ್ರಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಮೈಮುಲ್ ನಿರ್ದೇಶಕ ಪ್ರಕಾಶ್, ತಹಸೀಲ್ದಾರ್ ನಿಸರ್ಗ ಪ್ರಿಯಾ ಜೆ, ತಾ.ಪಂ ಇಒ ಸುನೀಲ್ ಕುಮಾರ್, ಹಾರಂಗಿ ಇಲಾಖೆಯ ಎಇಇ ಗೋಕುಲ್, ಇಂಜಿನಿಯರ್‌ಗಳಾದ ಗೌತಮ್, ಶಿವುಕುಮಾರ್, ಸರ್ಕಲ್ ಇನ್‌ಸ್ಪೆಕ್ಟರ್ ದೀಪಕ್, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ತಾಲೂಕು ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ, ವೈದ್ಯಾಧಿಕಾರಿ ಡಾ.ಸಂದೀಪ್, ವಲಯ ಅರಣ್ಯ ಅಧಿಕಾರಿ ಪದ್ಮಶ್ರೀ, ನಿರ್ಮಿತಿ ಕೇಂದ್ರದ ಎಇಇ ರಕ್ಷಿತ್, ಸೆಸ್ಕ್ ಎಇಇ ಪ್ರಶಾಂತ್, ಆಹಾರ ಇಲಾಖೆಯ ಶಿರಸ್ತೇದಾರ್ ಸಣ್ಣಸ್ವಾಮಿ, ಪಿಡಿಒ ಗಣೇಶ್, ಮುಖಂಡರಾದ ಕುಮಾರಶೆಟ್ಟಿ, ನರಸಿಗೌಡ, ಚಿಕ್ಕಣ್ಣನಾಯಕ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net