ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ ಮಾತನಾಡಿ, ತಾಲೂಕಿನಲ್ಲಿ 284 ಸರ್ಕಾರಿ ಶಾಲೆಗಳು, ಮತ್ತು 48 ಅನುದಾನಿತ ಹಾಗೂ ಅನುದಾನರಹಿತ ಸೇರಿದಂತೆ ಒಟ್ಟು 332 ಶಾಲೆಗಳಿದ್ದು, ಒಂದರಿಂದ ಹತ್ತನೇ ತರಗತಿವರೆಗೆ ಒಟ್ಟು 28064 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಪ್ರಸಕ್ತ ಸಾಲಿನಲ್ಲಿ 2960 ವಿದ್ಯಾರ್ಥಿಗಳು ನೋಂದಣಿಯಾಗಿದ್ದು ಈ ವರ್ಷ 3 ಪ್ರಿಪರೇಟರಿ ಪರೀಕ್ಷೆಗಳು ನಡೆಯಲಿದ್ದು ಮಾ.18 ರಿಂದ ಅಂತಿಮ ಪರೀಕ್ಷೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.