ಭಾರತೀಯ ರಿಸರ್ವ್ ಬ್ಯಾಂಕ್ ನಿಯಮದ ಪ್ರಕಾರ ತಮ್ಮ ಖಾತೆಗಳಿಗೆ ಇತ್ತೀಚಿನ ವಿಳಾಸ ದೃಢೀಕರಣ ಪತ್ರ, ಗುರುತಿನ ಚೀಟಿ, ಆಧಾರ್ ಸಂಖ್ಯೆ, ಪ್ಯಾನ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಗಳು ನೋಂದಣಿ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಹಾಗಾಗಿ ಈ ಹಿನ್ನೆಲೆಯಲ್ಲಿ ತಕ್ಷಣ ತಮ್ಮ ಆಧಾರ್ ಸಂಖ್ಯೆ, ಪ್ಯಾನ್‌ಕಾರ್ಡ್ ಇನ್ನಿತರ ದಾಖಲಾತಿಗಳನ್ನು ತೆಗೆದುಕೊಂಡು ಶಾಖೆಗೆ ಭೇಟಿ ನೀಡಿ, ನೋಂದಣಿ ಮಾಡಿಸಿಕೊಂಡು, ರಿಕೆವೈಸಿ, ಸಿಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.