ಡೆಂಘಿ ಮುನ್ನೆಚ್ಚರಿಕೆ ವಹಿಸಿ

ಸರಗೂರು ತಾಲೂಕಿನ ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಡೆಂಘಿ ಜಾಗೃತಿ ಜಾಥಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಚಾಲನೆ ನೀಡಿದರು. ಡಾ.ಬೃಂದಾ, ಶರಣಪ್ಪ, ರವಿರಾಜ್ ಇತರರು ಇದ್ದರು.
ಸರಗೂರು ತಾಲೂಕಿನ ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಡೆಂಘಿ ಜಾಗೃತಿ ಜಾಥಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಚಾಲನೆ ನೀಡಿದರು. ಡಾ.ಬೃಂದಾ, ಶರಣಪ್ಪ, ರವಿರಾಜ್ ಇತರರು ಇದ್ದರು.
Published on
ಸರಗೂರು: ಡೆಂೆ ಈಡಿಸ್ ಸೊಳ್ಳೆಯಿಂದ ಹರಡುವ ಕಾಯಿಲೆ ಆಗಿದ್ದು, ತೀವ್ರ ಜ್ವರ, ಕೀಲು ನೋವು, ಕಣ್ಣುಗಳ ಹಿಂದೆ ನೋವಿನಿಂದ ಕೂಡಿರುವುದು ಸೇರಿದಂತೆ ವಿವಿಧ ಲಕ್ಷಣಗಳು ಕಾಣಿಸಿಕೊಳ್ಳಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.
ತಾಲೂಕಿನ ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಚ್.ಡಿ.ಕೋಟೆಯ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಡೆಂೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡೆಂಘಿ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಡೆಂಘಿಗೆ ಕಾರಣವಾದ ಈಡಿಸ್ ಸೊಳ್ಳೆಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಬೇಕು. ಸೊಳ್ಳೆಗಳ ಉತ್ಪಾದನೆ ತಡೆಯುವುದು ಮತ್ತು ಕಚ್ಚಿಸಿಕೊಳ್ಳದಂತೆ ಎಚ್ಚರಿಕೆ ವಹಿಸುವುದೇ ಡೆಂಘಿ ತಡೆಗಟ್ಟುವ ಅತ್ಯುತ್ತಮ ಮಾರ್ಗವಾಗಿದೆ. ಸೊಳ್ಳೆ ಕಡಿತದಿಂದ ರಕ್ಷಣೆ ಪಡೆಯಲು ದೇಹ ಮುಚ್ಚುವ ಬಟ್ಟೆಗಳನ್ನು ಧರಿಸಬೇಕು, ಸೊಳ್ಳೆ ನಿವಾರಕಗಳ ಬಳಕೆ, ಮಲಗುವಾಗ ಸೊಳ್ಳೆ ಪರದೆ ಬಳಕೆ, ಮನೆಯ ಸುತ್ತಮುತ್ತ ಹೂವಿನ ಕುಂಡಗಳು, ತೆಂಗಿನ ಚಿಪ್ಪುಗಳು ಹಾಗೂ ಬಕೆಟ್‌ಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ನೀರಿನ ತೊಟ್ಟಿಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಒಣಗಿಸಿ ನೀರು ತುಂಬಿಸಬೇಕು ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬೃಂದಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶರಣಪ್ಪ, ರವಿರಾಜ್, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿ ನಾಗರಾಜು. ಅಶೀಮಾ, ಅರ್ಚನಾ, ರೇಖಾ, ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ಶಿವಮ್ಮ, ನೀಲಮ್ಮ, ವೀರಭದ್ರ, ಶಿವೇಶ್, ಮಹಾಲಕ್ಷ್ಮೀ, ಸುಬ್ರಮಣ್ಯ, ಆಶಾ ಕಾರ್ಯಕರ್ತೆಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net