ನೀರಿಗೆ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

 ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿಯ ಸಭೆ ಸೋಮವಾರ ಸಂಜೆ ನಡೆಯಿತು. ಪುಟ್ಟರಂಗಶೆಟ್ಟಿ, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್, ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್ ಇನ್ನಿತರರಿದ್ದರು.
ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿಯ ಸಭೆ ಸೋಮವಾರ ಸಂಜೆ ನಡೆಯಿತು. ಪುಟ್ಟರಂಗಶೆಟ್ಟಿ, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್, ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಬಿನಿ ಜಲಾಶಯ ಸಲಹಾ ಸಮಿತಿ ಸಭೆ
  • ನೀರಿನ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸೂಕ್ತ ಜಲ ನಿರ್ವಹಣೆ ಕೈಗೊಳ್ಳುವ ಕುರಿತು ಚರ್ಚೆ
  • ಲಭ್ಯವಿರುವ ನೀರಿನ ಪ್ರಮಾಣ ಹಾಗೂ ಮುಂದಿನ ಅವಶ್ಯಕತೆ ಪರಿಗಣಿಸಿ,
  • , ಕೆರೆಕಟ್ಟೆಗಳನ್ನು ತುಂಬಿಸಲು ಪ್ರಥಮ ಆದ್ಯತೆ ನೀಡಿ

ಮೈಸೂರು: 

ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ಕಬಿನಿ ಜಲಾಶಯ ಯೋಜನೆಯ 2026-27ನೇ ಸಾಲಿನ ನೀರಾವರಿ ಸಲಹಾ ಸಮಿತಿಯ ಸಭೆ  ನಡೆಯಿತು.

ಕಬಿನಿ ಜಲಾಶಯದಲ್ಲಿನ ಪ್ರಸ್ತುತ ಒಳಹರಿವು, ನೀರಿನ ಸಂಗ್ರಹಣೆ, ಕುಡಿಯುವ ನೀರಿನ ಬಳಕೆಗೆ ಲಭ್ಯವಿರುವ ಜಲಸಂಗ್ರಹ, ಎಡ ಹಾಗೂ ಬಲ ದಂಡೆಗಳಿಗೆ ನೀರು ಹರಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಕಬಿನಿ ಜಲಾನಯನ ಪ್ರದೇಶದ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಲಾಯಿತು.
ಮುಂದಿನ ದಿನಗಳಲ್ಲಿ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸೂಕ್ತ ಜಲ ನಿರ್ವಹಣೆ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆಯಲಾಯಿತು.
ಲಭ್ಯವಿರುವ ನೀರಿನ ಪ್ರಮಾಣ ಹಾಗೂ ಮುಂದಿನ ಅವಶ್ಯಕತೆ ಪರಿಗಣಿಸಿ, ಕೆರೆಕಟ್ಟೆಗಳನ್ನು ತುಂಬಿಸಲು ಪ್ರಥಮ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಲಭ್ಯತೆಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್,  ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಚಾಮರಾಜನಗರ ಡಿಸಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಸಿಇಒಗಳು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net