ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಕೇವಲ ಕಟ್ಟಡಗಳಲ್ಲ, ಇವು ಮೈಸೂರಿನ ಜೀವಂತ ಸಾಂಸ್ಕೃತಿಕ ಮತ್ತು ವಾಣಿಜ್ಯ ಪರಂಪರೆಯನ್ನು ಪ್ರತಿನಿಧಿಸುತ್ತವೆ. ಮೈಸೂರಿನವರೇ ಆದ ಸಿಎಂ ಸಿದ್ದರಾಮಯ್ಯ ಅವರು ಇವುಗಳ ಸಂರಕ್ಷಣೆ ಮತ್ತು ನವೀಕರಣಕ್ಕೆ ಆದ್ಯತೆ ನೀಡಿ, ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.