ಜೆ.ಎಸ್.ಜಗದೀಶ್ ಅಭಿಮಾನಿಗಳ ಬಳಗದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Talent award program
Talent award program
Published on
ಮೈಸೂರು: ಜೆ.ಎಸ್.ಜಗದೀಶ್ ಅಭಿಮಾನಿಗಳ ಬಳಗದ ವತಿಯಿಂದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ 23ರಂದು ಸಂಜೆ 5 ಗಂಟೆಗೆ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಆಯೋಜಿಸಲಾಗಿದೆ.
ನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್ ನೇತೃತ್ವದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಸಂಸದರು ಆದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ವಿದ್ಯಾರ್ಥಿಗಳನ್ನು ಅಭಿನಂದಿಸಲಿದ್ದಾರೆ. ಶಾಸಕ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಆಗಮಿಸುತ್ತಿರುವ ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ.ವಿನಯ್‌ಕುಮಾರ್ ವಿದ್ಯಾರ್ಥಿಗಳಿಗೆ ಶುಭನುಡಿ ಹೇಳಲಿದ್ದಾರೆ. ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಎಲ್.ನಾಗೇಂದ್ರ, ವೈದ್ಯೆ ಡಾ.ಯಶಸ್ವಿನಿ ವಸಿಷ್ಠ, ನಗರ ಪಾಲಿಕೆ ವಲಯ ಆಯುಕ್ತ ಸಂದೀಪ್, ಅಭಿವೃದ್ಧಿ ಸತ್ಯಮೂರ್ತಿ ಭಾಗವಹಿಸಲಿದ್ದಾರೆ ಎಂದು ಬಳಗದ ಎಚ್.ಎಸ್. ಲೋಹಿತ್ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net