ರಾಜ್ಯಸಭೆಗೆ ಉಗ್ರಪ್ಪ ಅಭ್ಯರ್ಥಿಯಾಗಲಿ

ಸುದ್ದಿಗೋಷ್ಠಿಯಲ್ಲಿತಾಯೂರು ಪ್ರಕಾಶ್ ಪಕ್ಷದ ವರಿಷ್ಠರನ್ನು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿತಾಯೂರು ಪ್ರಕಾಶ್ ಪಕ್ಷದ ವರಿಷ್ಠರನ್ನು ಆಗ್ರಹಿಸಿದರು.
Published on
ತಿ.ನರಸೀಪುರ : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರನ್ನು ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಬೇಕೆಂದು ಕರ್ನಾಟಕ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಅಧ್ಯಕ್ಷ ತಾಯೂರು ಪ್ರಕಾಶ್ ಪಕ್ಷದ ವರಿಷ್ಠರನ್ನು ಆಗ್ರಹಿಸಿದರು.
2026ರ ಜೂನ್‌ನಲ್ಲಿ ಅವಧಿ ಪೂರ್ಣಗೊಳ್ಳಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ವಿ.ಎಸ್.ಉಗ್ರಪ್ಪ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಹಿರಿಯ ಉಪಾಧ್ಯಕ್ಷ ದೇವರಾಜ್ ಪಾಳೇಗಾರ್ ಮಾತನಾಡಿ, ರಾಜ್ಯದ 83ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಫಲಿತಾಂಶದ ಮೇಲೆ ಪ್ರಭಾವ ಬೀರುವ ಶಕ್ತಿ ವಾಲ್ಮೀಕಿ ಸಮಾಜಕ್ಕಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಅರಿಯಬೇಕು ಎಂದರು. ಮಹರ್ಷಿ ವಾಲ್ಮೀಕಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಯಡದೊರೆ ಮಹೇಶ್ ನಾಯಕ, ಗ್ರಾಮ ಅರಣ್ಯ ಪಂಚಾಯಿತಿ ಮಾಜಿ ಸದಸ್ಯ ಮೂಗೂರು ಶೇಷಣ್ಣ, ಉದ್ಯಮಿ ಓಂಗುರು ಶಿವಣ್ಣ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net