ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಚಾರಿಕ ಮನೋಭಾವ ಬಿತ್ತಿ: ಸಚಿವ ಡಾ.ಎಚ್.ಸಿ ಮಹದೇವಪ್ಪ

ನಗರದಲ್ಲಿ  ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ‘ಕಲೋತ್ಸವ’ವನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಿದರು. ಕೆ. ಹರೀಶ್‌ಗೌಡ, ಡಿ. ಉದಯಕುಮಾರ್, ಸಿ.ಆರ್.ನಾಗರಾಜಯ್ಯ, ಎಂ.ಆರ್. ಅನಂತರಾಜು, ಕೆ.ಬಿ. ಸೋಮೇಗೌಡ ಮಾತನಾಡಿದರು.
ನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ‘ಕಲೋತ್ಸವ’ವನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಿದರು. ಕೆ. ಹರೀಶ್‌ಗೌಡ, ಡಿ. ಉದಯಕುಮಾರ್, ಸಿ.ಆರ್.ನಾಗರಾಜಯ್ಯ, ಎಂ.ಆರ್. ಅನಂತರಾಜು, ಕೆ.ಬಿ. ಸೋಮೇಗೌಡ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸ್ವತಂತ್ರ, ಸಮಾನತೆ, ಭ್ರಾತೃತ್ವ ಭಾವನೆಗಳನ್ನು ಬೆಳೆಸಬೇಕು
  • ಜಿಲ್ಲೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತರಬೇಕು
ಮೈಸೂರು: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬಿತ್ತಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.
ಮಹಾರಾಜ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ‘ಕಲೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬಿತ್ತಬೇಕು ಹಾಗೂ ಸಂವಿಧಾನದ ಆಶಯಗಳಾದ ಸ್ವತಂತ್ರ, ಸಮಾನತೆ, ಭ್ರಾತೃತ್ವ ಭಾವನೆಗಳನ್ನು ಬೆಳೆಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಿಧಾನದ ಪೀಠಿಕೆಯ ಬಗ್ಗೆ ಜಾಗೃತಿ ಮೂಡಿಸಿ ಉತ್ತಮ ಭಾರತದ ಪ್ರಜೆಗಳಾಗಿ ಹೊರಹೊಮ್ಮವಂತೆ ಮಾಡಬೇಕು ಎಂದು ಹೇಳಿದರು.
ಮೈಸೂರು ಜಿಲ್ಲೆ ಕಲೆ, ಸಾಹಿತ್ಯ, ಪುರಾತತ್ವ, ಸಂಗೀತಗಳಲ್ಲಿ ಉನ್ನತ ಸ್ಥಾನ ಪಡೆದಿದೆ. ನಾಲ್ವಡಿ ಕೃಷ್ಣಾರಾಜ ಒಡೆಯರ್ ಅವರು ತಮ್ಮ ಆಡಳಿತದ ಸಮಯದಲ್ಲೇ ಸಾಹಿತ್ಯ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು. ಹಾಗಾಗಿ ಜಿಲ್ಲೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತರಬೇಕು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜತೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಕಡೆಗೂ ಆಸಕ್ತಿ ಬೆಳೆಸಿಕೊಳ್ಳಬೇಕು ರೂಢಿಸಿಕೊಳ್ಳಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ವಾತಂತ್ರ್ಯಕ್ಕೆ ಮೊದಲು ಜನ ಜೀವನ ಹೇಗಿರಬೇಕು ಎಂದು ಅಡಿಪಾಯ ಹಾಕಿದರು. ಎಲ್ಲರಿಗೂ ಶಿಕ್ಷಣ, ಮೀಸಲಾತಿ, ಮಹಿಳಾ ಸಬಲೀಕರಣ, ಆರೋಗ್ಯ, ಕೃಷಿ, ತೋಟಗಾರಿಕೆ, ವಿದ್ಯುತ್, ರೈಲ್ವೆ, ಮೈಸೂರು ಪೇಪರ್ ಮಿಲ್, ಕನ್ನಡ ಸಾಹಿತ್ಯ ಪರಿಷತ್ ನಿರ್ಮಾಣ ಮಾಡಿದರು. ಅವರ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.
ಶಾಸಕ ಕೆ. ಹರೀಶ್‌ಗೌಡ ಮಾತನಾಡಿ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲಿಕ್ಕೆ ಉತ್ತಮ ವೇದಿಕೆಯಾಗಿದೆ. ಸೋಲು, ಗೆಲುವಿನ ಬಗ್ಗೆ ಚಿಂತಿಸಬೇಡಿ, ಪ್ರತಿಭೆಯನ್ನು ತೆರೆದಿಡಿ. ಅದರಿಂದ ಒಂದಲ್ಲ ಒಂದು ದಿನ ಗೆಲುವು ಸಿಕ್ಕೆ ಸಿಗುತ್ತದೆ ಎಂದು ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ. ಸೋಮೇಗೌಡ ಮಾತನಾಡಿ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು ಶಾಲಾ, ತಾಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ಭಾಗವಹಿಸಿ ವಿಜೇತರಾಗಿ ಬಂದಿದ್ದಾರೆ. ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳು ತಲುಪಿರುದರಲ್ಲಿ ಅವರ ಶ್ರಮ, ಪ್ರತಿಭೆ ಅಪಾರವಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಿ. ಉದಯಕುಮಾರ್, ಡಯಟ್ ನ ಉಪ ನಿರ್ದೇಶಕ ಹಾಗೂ ಪ್ರಾಂಶುಪಾಲ ಸಿ.ಆರ್.ನಾಗರಾಜಯ್ಯ, ಶಾಲಾ ಶಿಕ್ಷಣ ಇಲಾಖೆ ನೋಡಲ್ ಅಧಿಕಾರಿ ಹಾಗೂ ಶಿಕ್ಷಣಾಧಿಕಾರಿ ಎಂ.ಆರ್. ಅನಂತರಾಜು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net