ಪ್ಪುಪಟ್ಟಿ ಧರಿಸಿ ಶಿಕ್ಷಕರ ಬೋಧನೆ

ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು ಕಪ್ಪು ಬಟ್ಟೆ ಧರಿಸಿ ಬೋಧನೆ ಮಾಡಿದರು.
ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು ಕಪ್ಪು ಬಟ್ಟೆ ಧರಿಸಿ ಬೋಧನೆ ಮಾಡಿದರು.
Published on
ಕೆ.ಆರ್.ನಗರ: ಸೇವಾನಿರತ ಶಿಕ್ಷಕರಿಗೆ ಟಿ.ಇ.ಟಿ ಕಡ್ಡಾಯ ಮಾಡಿರುವ ಸುಪ್ರೀಂಕೋರ್ಟ್ ಆದೇಶ ಪಾಲನೆಯಿಂದ ಪಾರಾಗಲು ಸೂಕ್ತ ಕಾನೂನು ತಿದ್ದುಪಡಿ ತಂದು ನ್ಯಾಯ ಒದಗಿಸುವಂತೆ ಆಗ್ರಹಿಸಿ ಗುರುವಾರ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನಾಧ್ಯಂತ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಬೋಧನೆ ಮಾಡಿದರು.
ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು(ಎನ್‌ಪಿಎಸ್) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆಯನ್ನು(ಒಪಿಎಸ್) ಮರು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎನ್.ಸ್ವಾಮಿ ಮಾತನಾಡಿ, ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸೇವಾನಿರತರಿಗೂ ಕಡ್ಡಾಯಗೊಳಿಸಿರುವ ಸುಪ್ರೀಂಕೋರ್ಟ್ ಆದೇಶ ಶಿಕ್ಷಕರಿಗೆ ನೋವು ತಂದಿದೆ. ಕಾನೂನಿಗೆ ಸೂಕ್ತ ತಿದ್ದುಪಡಿ ತರಬೇಕು. ಟಿಇಟಿ ಕಡ್ಡಾಯ ಮಾಡಬಾರದು. ಗುತ್ತಿಗೆ ಆಧಾರದ ನೇಮಕಾತಿ ಕೈಬಿಟ್ಟು ಕಾಯಂ ನೇಮಕಕ್ಕೆ ಆದ್ಯತೆ ನೀಡಬೇಕು. ದೇಶದ ಎಲ್ಲ ಶಿಕ್ಷಕರಿಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೇಂದ್ರದ ವೇತನವನ್ನು ರಾಜ್ಯದ ಶಿಕ್ಷಕರಿಗೂ ಅನ್ವಯಿಸಬೇಕು ಎಂದು ಒತ್ತಾಯಿಸಿ ಒಂದು ದಿನ ಸಾಂಕೇತಿಕವಾಗಿ ಕಪ್ಪು ಪಟ್ಟಿ ಧರಿಸಿ ಬೋಧನೆ ಮಾಡುತ್ತಿದ್ದೇವೆ ಎಂದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ಣಯದಂತೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನ 245 ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಕಪ್ಪು ಬಟ್ಟೆ ಧರಿಸಿ ಬೋಧನೆಯಲ್ಲಿ ತೊಡಗಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net