ಖದೀಮರು ದೇವಾಲಯದ ಬಾಗಿಲಿಗೆ ಹಾಕಿದ್ದ ಬೀಗವನ್ನು ಒಡೆದು ಒಳನುಗ್ಗಿ ದೇವಿಯ ವಿಗ್ರಹಕ್ಕೆ ಧರಿಸಿದ್ದ ಸುಮಾರು 15 ಗ್ರಾಂ ತೂಕದ ಮಾಂಗಲ್ಯವನ್ನು ಕಳವು ಮಾಡಿದ್ದಾರೆ. ಅಲ್ಲದೆ, ದೇವಾಲಯದ ಗೋಲಕವನ್ನು ಒಡೆದು ಅದರಲ್ಲಿ ಸಂಗ್ರಹವಾಗಿದ್ದ ಹಣವನ್ನು ದೋಚಿದ್ದಾರೆ. ಗ್ರಾಮಸ್ಥರು ಹಾಗೂ ದೇವಾಲಯ ಸೇವಾ ಸಮಿತಿ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.