ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಬಿಡಲಿ

ತಿ.ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಅಕ್ಷರದ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ದಲಿತ ಸಂಘಟನೆಗಳ ಒಕ್ಕೂಟದಿಂದ ಆಚರಿಸಲಾಯಿತು. ಆಲಗೂಡು ಶಿವಕುಮಾರ್, ಬನ್ನಹಳ್ಳಿ ಸೋಮಣ್ಣ, ಯಾಚೇನಹಳ್ಳಿ ಸೋಮಶೇಖರ್, ಕರೋಹಟ್ಟಿ ನಾಗೇಶ ಇತರರು ಇದ್ದರು.
ತಿ.ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಅಕ್ಷರದ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ದಲಿತ ಸಂಘಟನೆಗಳ ಒಕ್ಕೂಟದಿಂದ ಆಚರಿಸಲಾಯಿತು. ಆಲಗೂಡು ಶಿವಕುಮಾರ್, ಬನ್ನಹಳ್ಳಿ ಸೋಮಣ್ಣ, ಯಾಚೇನಹಳ್ಳಿ ಸೋಮಶೇಖರ್, ಕರೋಹಟ್ಟಿ ನಾಗೇಶ ಇತರರು ಇದ್ದರು.
Published on

ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಒತ್ತಾಯ

ತಿ.ನರಸೀಪುರ: ಮಹಿಳೆಯರು ಸೇರಿದಂತೆ ಶೋಷಿತರು ಹಾಗೂ ಹಿಂದುಳಿದ ವರ್ಗಗಳ ಜನರಿಗೂ ಶಿಕ್ಷಣವನ್ನು ನಿರಾಕರಿಸಿದ್ದ ಅಂದಿನ ಸಾಮಾಜಿಕ ವ್ಯವಸ್ಥೆಯನ್ನು ಧಿಕ್ಕರಿಸಿ, ಸಾರ್ವತ್ರಿಕ ಶಿಕ್ಷಣವನ್ನು ಆರಂಭಿಸಿದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನವನ್ನು ಶಿಕ್ಷಣ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಿಸಿಬೇಕು. ಪಬ್ಲಿಕ್ ಸ್ಕೂಲ್ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಕೈ ಬಿಡಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಒತ್ತಾಯಿಸಿದರು.
ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಶನಿವಾರ ದಲಿತ ಸಂಘಟನೆಗಳ ಒಕ್ಕೂಟದಿಂದ ಅಕ್ಷರದ ಮಾತೆ ಶ್ರೀ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸಿ ಮಾತನಾಡಿದ ಅವರು, ಬಹುಸಂಖ್ಯಾತ ಸಮುದಾಯಕ್ಕೆ ಶಿಕ್ಷಣವನ್ನು ನಿರಾಕರಿಸಿದ್ದ 1850ರ ಕಾಲಘಟ್ಟದಲ್ಲಿ ಸ್ವಂತ ಶಿಕ್ಷಣ ಸಂಸ್ಥೆಯನ್ನು ತೆರೆದು ಹೆಣ್ಣು ಮಕ್ಕಳು ಹಾಗೂ ಶೋಷಿತ ಸಮುದಾಯಗಳಿಗೆ ಶಿಕ್ಷಣ ನೀಡಿದ ಫುಲೆ ದಂಪತಿ ಸಾಧನೆ ಹೆಗ್ಗುರುತಾಗಿದೆ ಎಂದರು.
ಬಡವರು ಮತ್ತು ಮಧ್ಯಮ ವರ್ಗದ ಜನರೇ ಹೆಚ್ಚಿರುವ ದಲಿತರು ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವ ಸರ್ಕಾರಿ ಶಾಲೆಗಳನ್ನು ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಕ್ರೋಢೀಕರಿಸುತ್ತೇವೆ ಎಂದು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನಿರ್ಧಾರವನ್ನು ಕೈಬಿಡಬೇಕು. ಮನುವಾದಿ ವ್ಯವಸ್ಥೆಯ ನಿರಂತರ ನಿಂದನೆ, ಹೀಯಾಳಿಕೆ ಹಾಗೂ ಅಸಹನೆಯನ್ನು ಲೆಕ್ಕಿಸದೇ ಶಿಕ್ಷಣ ಕಲಿಸಿದ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಶಿಕ್ಷಣದ ದಿನವನ್ನಾಗಿ ಘೋಷಣೆ ಮಾಡಬೇಕು ಎಂದು ಆಲಗೂಡು ಶಿವಕುಮಾರ್ ಸರ್ಕಾರವನ್ನು ಆಗ್ರಹಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಭಾಗಿಯ ಸಂಚಾಲಕ ಬನ್ನಹಳ್ಳಿ ಸೋಮಣ್ಣ, ತಾಲೂಕು ಸಂಚಾಲಕ ಯಾಚೇನಹಳ್ಳಿ ಸೋಮಶೇಖರ್, ಸಂಘಟನಾ ಸಂಚಾಲಕರಾದ ಕರೋಹಟ್ಟಿ ನಾಗೇಶ, ಆಲಗೂಡು ನಾಗರಾಜ್ ಮೂರ್ತಿ, ಕಿರಗಸೂರು ರಜನಿ, ಮುಖಂಡರಾದ ಮಾದಾಪುರ ಉಮೇಶ, ಬನ್ನಹಳ್ಳಿ ದೊರೆಸ್ವಾಮಿ ಹಾಗೂ ಚೌಹಳ್ಳಿ ಮಹದೇವಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net