ದಲಿತರ ಭವಿಷ್ಯ, ಹಕ್ಕು ಕಸಿಯುವ ಸಂಚು

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಭಾನುವಾರ ದಲಿತ ಸಂಘಟನೆಗಳ ಒಕ್ಕೂಟದಿಂದ 208ನೇ ಭೀಮಾ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮವನ್ನು ಜ್ಞಾನಪ್ರಕಾಶ್ ಸ್ವಾಮೀಜಿ ಉದ್ಘಾಟಿಸಿದರು. ಸಹಾಯಕ ಪೊಲೀಸ್ ಆಯುಕ್ತ ರವಿಪ್ರಸಾದ್, ವಕೀಲರಾದ ಉಮೇಶ್, ದಸಂಸ ಸಂಚಾಲಕರಾದ ಚುಂಚನಹಳ್ಳಿ ಮಲ್ಲೇಶ್ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • Dalits
ನಂಜನಗೂಡು: ದಲಿತರ ಭವಿಷ್ಯ, ಶಿಕ್ಷಣ ಮತ್ತು ಹಕ್ಕುಗಳನ್ನು ಕಿತ್ತುಕೊಳ್ಳುವ ಸಂಚು ಜಾರಿಯಲ್ಲಿದೆ, ಸಂವಿಧಾನವನ್ನು ಮೌನವಾಗಿ ಮುಗಿಸುವ ಕೆಲಸವಾಗುತ್ತಿದೆ ಎಂದು ಉರಿಲಿಂಗಿ ಪೆದ್ದಿ ಮಠದ ಮಠಾಧ್ಯಕ್ಷರಾದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಭಾನುವಾರ ದಲಿತ ಸಂಘಟನೆಗಳ ಒಕ್ಕೂಟದಿಂದ 208ನೇ ಭೀಮಾ ಕೋರೆಂಗಾವ್ ವಿಜಯೋತ್ಸವದ ಅಂಗವಾಗಿ ಸಂಘ ಪರಿವಾರದ ಒಳಸಂಚು ಮತ್ತು ದಲಿತ ಚಳವಳಿಗಳ ಪ್ರತಿರೋಧ ಜನಜಾಗೃತಿ ಸಮಾವೇಶದಲ್ಲಿ ಬುದ್ಧ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಭೀಮಾ ಕೋರೆಂಗಾವ್ ವಿಜಯೋತ್ಸವ ಸ್ವಾಭಿಮಾನದ ಸಂಕೇತವಾಗಿದೆ. ಅದರ ಹೋರಾಟದ ಫಲವಾಗಿ ಇಂದು ನಾವು ಬದುಕುತ್ತಿದ್ದೇವೆ. ಹಣದ ಆಸೆಗೆ ಮತವನ್ನು ಮಾರಿಕೊಂಡು ಬಾಬಾ ಸಾಹೇಬರಿಗೆ ದ್ರೋಹ ಬಗೆಯಬೇಡಿ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ದಸಂಸ ಜಿಲ್ಲಾ ಸಂಚಾಲಕ ಚುಂಚನಹಳ್ಳಿ ಮಲ್ಲೇಶ್ ಮಾತನಾಡಿ, ಸಮುದಾಯವು ಹರಿದು ಹಂಚಿ ಹೋಗುತ್ತಿದೆ. ಒಳ ಮೀಸಲಾತಿ ಹೋರಾಟದಿಂದ ಸಮುದಾಯಕ್ಕೆ ಅನ್ಯಾಯವಾಗುತ್ತಿತ್ತು. ಇದಕ್ಕೆ ಜ್ಞಾನಪ್ರಕಾಶ ಸ್ವಾಮೀಜಿ ಅವರು ಹೋರಾಟ ನಡೆಸಿದ್ದ ಪರಿಣಾಮವಾಗಿ ನಮ್ಮ ಸಮುದಾಯದ ಶಿಕ್ಷಣಕ್ಕೆ ಅನುಕೂಲವಾಗಿದೆ. ರಾಜಕೀಯ ನಾಯಕರು ಸಮುದಾಯದ ಹಿತವನ್ನು ಕಾಪಾಡುತ್ತಿಲ್ಲ. ಹಾಗಾದರೆ ಹೋರಾಟ ಮಾಡುವವರು ಯಾರು ಎಂದು ಪ್ರಶ್ನಿಸಿದರು.
ಮೈಸೂರು ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ಸಂಶೋಧನಾ ವಿಸ್ತರಣಾ ಕೇಂದ್ರದ ಹಿರಿಯ ಪ್ರಾಧ್ಯಾಪಕ ಜೆ.ಸೋಮಶೇಖರ್ ಮುಖ್ಯ ಭಾಷಣ ಮಾಡಿ, ಹೊರ ಶತ್ರುಗಳಿಗಿಂತ ಒಳ ಶತ್ರುಗಳು ಅಪಾಯಕಾರಿ. ಬಾಬಾ ಸಾಹೇಬರ ಪ್ರಬುದ್ಧ ಭಾರತದ ನಿರ್ಮಾಣದ ಕನಸು ಈಡೇರಿಸುವಲ್ಲಿ ನಾವು ವಿಫಲರಾಗಿದ್ದೇವೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಭೀಮಾ ಕೋರಂಗಾವ್ ವಿಜಯೋತ್ಸವದ ಜನಜಾಗೃತಿ ಸಮಾವೇಶದ ರಥ ಮತ್ತು ಬುದ್ಧನ ಬೆಳ್ಳಿ ರಥೋತ್ಸವಕ್ಕೆ ಶ್ರೀಜ್ಞಾನ ಪ್ರಕಾಶ ಸ್ವಾಮೀಜಿ ಚಾಲನೆ ನೀಡಿದರು. ನಗರದ ಆರ್.ಪಿ. ರಸ್ತೆಯ ಮೂಲಕ ಅಂಬೇಡ್ಕರ್ ಭವನದ ವರೆಗೆ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸಂಸ ಜಿಲ್ಲಾ ಸಂಚಾಲಕ ದೇವರಸನಹಳ್ಳಿ ಪುಟ್ಟಸ್ವಾಮಿ ವಹಿಸಿದ್ದರು. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತರಾದ ಮೈಸೂರಿನ ಸಹಾಯಕ ಪೊಲೀಸ್ ಆಯುಕ್ತರಾದ ರವಿಪ್ರಸಾದ್ ರವರಿಗೆ ದಲಿತ ಸಂಘಟನೆಗಳ ಒಕ್ಕೂಟದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಪೊಲೀಸ್ ಆಯುಕ್ತ ರವಿಪ್ರಸಾದ್, ವಕೀಲರಾದ ಉಮೇಶ್, ದಸಂಸ ಸಂಚಾಲಕರಾದ ಚುಂಚನಹಳ್ಳಿ ಮಲ್ಲೇಶ್, ಮಲ್ಲಹಳ್ಳಿ ನಾರಾಯಣ್, ಕಾರ್ಯ ಬಸವಣ್ಣ, ಶಂಕರಪುರ ಸುರೇಶ್, ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಅಭಿನಾಗಭೂಷಣ್, ದಸಂಸ ತಾಲೂಕು ಸಂಚಾಲಕ ಗಟ್ಟವಾಡಿ ಮಹೇಶ್, ಕಳಲೆ ಕುಮಾರ್, ರಾಜೂರು ನಟರಾಜು, ಉಮೇಶ್ ರಾಜ್, ಮರಿಸ್ವಾಮಿ, ಯಶವಂತ ಕುಮಾರ್, ಜಯರಾಮ್, ಮಹೇಶ್, ಸಿದ್ದರಾಜು, ಆನಂದ್, ಸೋಮಣ್ಣ, ನವೀನ್ ಸೇರಿದಂತೆ ಹಲವರು ಭಾಗವಹಿಸಿದ್ದರು.
11 ಟಿರಿಜ ಟಿತಿ 03
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಭಾನುವಾರ ದಲಿತ ಸಂಘಟನೆಗಳ ಒಕ್ಕೂಟದಿಂದ 208ನೇ ಭೀಮಾ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮವನ್ನು ಜ್ಞಾನಪ್ರಕಾಶ್ ಸ್ವಾಮೀಜಿ ಉದ್ಘಾಟಿಸಿದರು. ಸಹಾಯಕ ಪೊಲೀಸ್ ಆಯುಕ್ತ ರವಿಪ್ರಸಾದ್, ವಕೀಲರಾದ ಉಮೇಶ್, ದಸಂಸ ಸಂಚಾಲಕರಾದ ಚುಂಚನಹಳ್ಳಿ ಮಲ್ಲೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net