ವಿಜೃಂಭಣೆಯ ಶಂಭುಲಿಂಗೇಶ್ವರ ಸ್ವಾಮಿ ವಾರ್ಷಿಕೋತ್ಸವ

ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಕಪಿಲಾ ನದಿ ತೀರದಲ್ಲಿರುವ ಶ್ರೀ ಶಂಭುಲಿಂಗೇಶ್ವರ ಸ್ವಾಮಿಯ ವಾರ್ಷಿಕೋತ್ಸವ ಸಮಾರಂಭ ವಿಜೃಂಭಣೆಯಿಂದ ನಡೆಯಿತು.
ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಕಪಿಲಾ ನದಿ ತೀರದಲ್ಲಿರುವ ಶ್ರೀ ಶಂಭುಲಿಂಗೇಶ್ವರ ಸ್ವಾಮಿಯ ವಾರ್ಷಿಕೋತ್ಸವ ಸಮಾರಂಭ ವಿಜೃಂಭಣೆಯಿಂದ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಮುಳ್ಳೂರು ಗ್ರಾಮದ ಕಪಿಲಾ ನದಿ
  • ಶಂಭುಲಿಂಗೇಶ್ವರ ಸ್ವಾಮಿ
ಸುತ್ತೂರು: ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಕಪಿಲಾ ನದಿ ತೀರದಲ್ಲಿರುವ ಶ್ರೀ ಶಂಭುಲಿಂಗೇಶ್ವರ ಸ್ವಾಮಿಯ 15 ನೇ ವರ್ಷದ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮಕ್ಕೆ ಮಲ್ಲನಮೂಲೆ ಮಠದ ಶ್ರೀ ಚೆನ್ನಬಸವ ಸ್ವಾಮೀಜಿ ಚಾಲನೆ ನೀಡಿದರು. ಬ್ರಾಹ್ಮಿ ಮುಹೂರ್ತದಲ್ಲಿ ಗಂಗಾ ಪೂಜೆ, ಮಹಾಗಣಪತಿ, ಉಮಾಮಹೇಶ್ವರ, ನವಗ್ರಹ ಪೂಜೆ ನೆರವೇರಿತು.
ಶಂಭುಲಿಂಗೇಶ್ವರ ಸ್ವಾಮಿ ಹಾಗೂ ಆಲದಮ್ಮ ದೇವಿ, ಮಹಾಗಣಪತಿ, ವೀರಭದ್ರೇಶ್ವರ, ನಂಜುಂಡೇಶ್ವರ ಹಾಗೂ ನಂದೀಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಏಕವಾರ ರುದ್ರಾಭಿಷೇಕ, ವಿಶೇಷ ಪುಷ್ಪಾಲಂಕಾರ ಮಹಾಮಂಗಳಾರತಿ ನೆರವೇರಿಸಲಾಯಿತು. ಸುತ್ತಮುತ್ತಲಿನ ಗ್ರಾಮಸ್ಥರ ಸೇರಿದಂತೆ ಜಿಲ್ಲೆಯ ಹಲವಾರು ಭಾಗಗಳಿಂದ ಭಕ್ತರು ಆಗಮಿಸಿದ್ದರು.
ಇದೇ ವೇಳೆ ದೇವಾಲಯ ಸಮಿತಿಯ ಅಧ್ಯಕ್ಷ ದೇವಲಾಪುರ ಶಿವಸ್ವಾಮಿ ಮಾತನಾಡಿ, ಮುಂದಿನ ದಿನಗಳಲ್ಲಿ ದೇವಾಲಯ ವತಿಯಿಂದ ಭಕ್ತರ ಹಾಗೂ ದಾನಿಗಳ ಸಹಕಾರದೊಂದಿಗೆ ವೃದ್ಧಾಶ್ರಮ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶ್ರೀ ಗುರುಶಾಂತ ಸ್ವಾಮೀಜಿ, ಶ್ರೀ ಪರಶಿವ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ಜಡೆ ಸ್ವಾಮೀಜಿ, ಮುಖಂಡರಾದ ಆಲತ್ತೂರು ಮಹೇಶ್, ಶಿವಣ್ಣ, ಕಡಕೊಳ ಜವರನಾಯಕ, ಮರಿನಾಯಕ, ರಾಜಶೇಖರ, ಚಾಮುಂಡಿಬೆಟ್ಟ ಶಂಭುಲಿಂಗನಾಯಕ, ನಾಗರಾಜು, ರಾಮಪುರ ಚಿನ್ನಸ್ವಾಮಿ, ಗುರುಮಲ್ಲಪ್ಪ ಇತರರಿದ್ದರು. ಇದೇ ವೇಳೆ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net