ಭಾರತದ ಆಹಾರ ಸಮಸ್ಯೆ ನೀಗಿಸಿದ್ದ ಮಹಾನಾಯಕ

ಡಾ. ಬಾಬು ಜಗಜೀವನರಾಮ್ ಜನ್ಮ ದಿನಾಚರಣೆ ಅಂಗವಾಗಿ ಪಿರಿಯಾಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಗಣ್ಯರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಿಸರ್ಗಪ್ರಿಯ, ಡಾ.ರಮೇಶ್, ಎಸ್.ರಾಮು, ಸೀಗೂರು ವಿಜಯ್ ಕುಮಾರ್ ಇತರರು ಇದ್ದರು.
ಡಾ. ಬಾಬು ಜಗಜೀವನರಾಮ್ ಜನ್ಮ ದಿನಾಚರಣೆ ಅಂಗವಾಗಿ ಪಿರಿಯಾಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಗಣ್ಯರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಿಸರ್ಗಪ್ರಿಯ, ಡಾ.ರಮೇಶ್, ಎಸ್.ರಾಮು, ಸೀಗೂರು ವಿಜಯ್ ಕುಮಾರ್ ಇತರರು ಇದ್ದರು.
Published on
ಪಿರಿಯಾಪಟ್ಟಣ: ಡಾ. ಬಾಬು ಜಗಜೀವನರಾಮ್ ಅವರ ಆಡಳಿತ ಸುಧಾರಣೆಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ತಹಸೀಲ್ದಾರ್ ನಿಸರ್ಗಪ್ರಿಯ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಮ್ ರವರ 119ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಗಜೀವನರಾಮ್ ಅವರು ರಾಷ್ಟ್ರದ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಇವರ ಆಡಳಿತದ ಅವಧಿಯಲ್ಲಿ ರಾಷ್ಟ್ರವು ಆಹಾರದ ಕೊರತೆಯನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಆಧುನಿಕ ಯೋಜನೆಗಳನ್ನು ರಾಷ್ಟ್ರಕ್ಕೆ ಕೊಡುಗೆಯಾಗಿ ನೀಡಿ ಆಹಾರ ಸಮಸ್ಯೆಯನ್ನು ನೀಗಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಮುಖ್ಯ ಭಾಷಣಕಾರರಾಗಿ ಉಪನ್ಯಾಸಕ ಡಾ.ರಮೇಶ್ ಮಾತನಾಡಿ, ಡಾ.ಬಾಬು ಜಗಜೀವನರಾಮ್ ಅವರ ಸಾಮಾಜಿಕ, ಆರ್ಥಿಕ, ಹಾಗೂ ರಾಷ್ಟ್ರದ ಅಭಿವೃದ್ಧಿಯ ಚಿಂತನೆಗಳು ಸಾಮಾಜಿಕ ಅಭಿವೃದ್ಧಿಗೆ ಕಾರಣವಾಗಿದೆ. ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಜತೆಗೆ ಬೆನ್ನೆಲುಬಾಗಿ ನಿಂತು ಶ್ರಮಿಸಿದ ಇವರು ಶೋಷಿತ ಸಮುದಾಯಗಳ ದಾರಿದೀಪವಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಾದಾರ ಮಹಾ ಸಭಾ ತಾಲೂಕು ಅಧ್ಯಕ್ಷ ಸೀಗೂರು ವಿಜಯ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಸಮುದಾಯದ ಅಧ್ಯಕ್ಷ ಚಪ್ಪರದಳ್ಳಿ ರವಿ, ತಾಪಂ ಮಾಜಿ ಸದಸ್ಯ ಎಸ್.ರಾಮು, ಆರ್.ಸಿ.ಚಂದ್ರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೆ ಗೌಡ, ರೇಷ್ಮೆ ಇಲಾಖಾಧಿಕಾರಿ ಚಂದ್ರೆಗೌಡ, ಆಹಾರ ಶಿರಸ್ತೇದಾರ್ ಸಣ್ಣಸ್ವಾಮಿ, ಪಶು ಸಂಗೋಪನ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ತೋಟಗಾರಿಕೆ ಅಧಿಕಾರಿ ಪ್ರಸಾದ್, ಮುಖಂಡರಾದ ಪಿ.ಮಹದೇವ್, ಭೂತನಹಳ್ಳಿ ಶಿವಣ್ಣ, ಬೇಗೂರು ಮಹದೇವ್, ಲೋಕೇಶ್ ಹೊನ್ನೇನಹಳ್ಳಿ, ದೇವರಾಜ್, ನರಸಿಂಹ ಮೂರ್ತಿ, ಜಯಸ್ವಾಮಿ, ದೇವೇಂದ್ರ, ಅಂಬಾರಿ ರವಿ, ಆದಿಶೇಷ,ವಿಷ್ಣು, ಕುಮಾರ, ಕೃಷ್ಣ ಮೂರ್ತಿ,ನಾರಾಯಣ ಸೇರಿದಂತೆ ಇತರರಿದ್ದರು.
----------
05.ಥಿಠಿ. 01:
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net