ಸಮ ಸಮಾಜದ ಹರಿಕಾರ ಶಿವಶರಣ ಹಡಪದ ಅಪ್ಪಣ್ಣ

ಕಲಾಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣ್ಯರು ಶ್ರೀ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಡಾ.ಪಿ.ಶಿವರಾಜು, ಮುತ್ತುರಾಜ್ ಇತರರಿದ್ದರು.
ಕಲಾಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣ್ಯರು ಶ್ರೀ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಡಾ.ಪಿ.ಶಿವರಾಜು, ಮುತ್ತುರಾಜ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿಕೆ
ಶಿವಶರಣ ಹಡಪದ ಅಪ್ಪಣ್ಣ ಸರಳತೆ, ಕಾಯಕ ನಿಷ್ಠೆ ಹಾಗೂ ಸಮ ಸಮಾಜದ ಹರಿಕಾರರಾಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿದರು.
ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಶ್ರೀ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
12ನೇ ಶತಮಾನದ ಕಲ್ಯಾಣ ಕ್ರಾಂತಿಯ ಪ್ರಮುಖ ಶರಣರಾಗಿದ್ದ ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಅನುಭವ ಮಂಟಪದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕಾಯಕವೇ ಕೈಲಾಸ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡ ಅವರು ‘ಬಸವಪ್ರಿಯ ಕೂಡಲ ಚನ್ನಸಂಗಮದೇವ’ ಅಂಕಿತನಾಮದಲ್ಲಿ 240ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಜಾತಿ ವ್ಯವಸ್ಥೆ, ಅಸಮಾನತೆ ಹಾಗೂ ಮೂಢನಂಬಿಕೆಗಳನ್ನು ಖಂಡಿಸಿದರು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ, ಹಡಪದ ಅಪ್ಪಣ್ಣ ಅವರು ನಿಷ್ಠೆ, ಪ್ರಾಮಾಣಿಕತೆ ಮತ್ತು ಸಮಾಜ ಪರಿವರ್ತನೆ ಚಿಂತನೆಯ ಮಹಾನ್ ವ್ಯಕ್ತಿಯಾಗಿದ್ದರು. ಬಸವಣ್ಣ ಅವರ ಕಾಯಕ ಮತ್ತು ದಾಸೋಹ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಅಪರ ಪ್ರಾದೇಶಿಕ ಆಯುಕ್ತ ಡಾ.ಪಿ.ಶಿವರಾಜು ಮಾತನಾಡಿ, ಬಸವಣ್ಣ ಹಾಗೂ ಹಡಪದ ಅಪ್ಪಣ್ಣ ಅವರು ನೀಡಿದ ಆದರ್ಶಗಳು ಸದಾ ಮಾದರಿಯಾಗಿದ್ದು, ಶಿಕ್ಷಣದ ಮೂಲಕ ಸಮಾಜದಲ್ಲಿನ ಜಾತಿ ತಾರತಮ್ಯವನ್ನು ನಿವಾರಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುತ್ತುರಾಜ್, ಪರಿವರ್ತನಾ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎನ್.ಧನಂಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net